ಗುರುವಾರ , ಜುಲೈ 29, 2021
22 °C

ಅವರಿಂದ ಸಿಟ್ಟು: ಇವರಿಂದ ಪ್ರೀತಿ!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: `ನನ್ನ ವಾರ್ಡ್‌ನಲ್ಲಿ ಕೈಗೊಳ್ಳಬೇಕಾದ 26 ಕಾಮಗಾರಿಗಳಿಗೆ ಸಂಬಂಧಿಸಿದ ಫೈಲುಗಳನ್ನು ಮುಂದೆ ಕಳುಹಿಸದೆ ದಕ್ಷಿಣ ವಲಯದ ಹೆಚ್ಚುವರಿ ಆಯುಕ್ತ ಡಾ.ಕೆ.ವಿ. ತ್ರಿಲೋಕಚಂದ್ರ ಅನ್ಯಾಯ ಮಾಡಿದ್ದಾರೆ' ಎಂದು ಕಾಂಗ್ರೆಸ್ ಸದಸ್ಯ ಕೆ.ಚಂದ್ರಶೇಖರ್ ದೂರಿದರು.`ಆದ್ಯತೆ ಮೇರೆಗೆ ಕಾಮಗಾರಿಗಳಿಗೆ ಕಾರ್ಯದ ಆದೇಶ ನೀಡಬೇಕು ಎಂದು ಆಯುಕ್ತರು ಸುತ್ತೋಲೆ ಹೊರಡಿಸಿದ್ದರೂ ಅವರು ಕ್ರಮ ಕೈಗೊಂಡಿಲ್ಲ' ಎಂದರು.`ಇ-ಪ್ರೊಕ್ಯೂರ್‌ಮೆಂಟ್‌ಗೆ ಸಂಬಂಧಿಸಿದಂತೆ ಕೆಲವು ತಾಂತ್ರಿಕ ಅಡಚಣೆಗಳು ಇದ್ದು, ವಿವರಣೆ ಕೇಳಿ ರಾಜ್ಯ ಸರ್ಕಾರದ ಇ-ಆಡಳಿತ ವಿಭಾಗಕ್ಕೆ ಪತ್ರ ಬರೆಯಲಾಗಿದೆ. ಅಲ್ಲಿಂದ ವಿವರಣೆ ಬಂದ ತಕ್ಷಣವೇ ತೀರ್ಮಾನ ಕೈಗೊಳ್ಳಲಾಗುವುದು' ಎಂದು ತ್ರಿಲೋಕಚಂದ್ರ ಉತ್ತರಿಸಿದರು.ಬಿಬಿಎಂಪಿ ಶೈಕ್ಷಣಿಕ ಸಂಸ್ಥೆಗಳಲ್ಲಿನ  ಅವ್ಯವಸ್ಥೆ ಕುರಿತು ಪ್ರಸ್ತಾಪಿಸಿದ ಬಿಜೆಪಿ ಸದಸ್ಯೆ ಶಾಂತಕುಮಾರಿ, `ದಕ್ಷ ಅಧಿಕಾರಿಯಾಗಿರುವ ತ್ರಿಲೋಕಚಂದ್ರ ಅವರಿಗೆ ಶಿಕ್ಷಣ ವಿಭಾಗದ ಮುಖ್ಯಸ್ಥರಾಗಿ ಹೆಚ್ಚುವರಿ ಹೊಣೆ ನೀಡುವ ಮೂಲಕ ಅವ್ಯವಸ್ಥೆ ಹೋಗಲಾಡಿಸಬೇಕು' ಎಂದು ಕೋರಿದರು. ಆಡಳಿತ ಪಕ್ಷದ ಸದಸ್ಯರು ಅದಕ್ಕೆ ದನಿಗೂಡಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.