ಸೋಮವಾರ, ಮೇ 17, 2021
27 °C

ಅವಿಶ್ವಾಸ ಗೊತ್ತುವಳಿ ಸಭೆ ವೇಳೆ ಗಲಭೆ: ಲಾಠಿ ಪ್ರಹಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಜಾಲಹಳ್ಳಿ:  ದೇವದುರ್ಗ ತಾಲ್ಲೂಕಿನ ಪಲಕನಮರಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ- ಉಪಾಧ್ಯಕ್ಷೆ ವಿರುದ್ಧ ಅವಿಶ್ವಾಸ ಗೊತ್ತುವಳಿ ಸಭೆಯ ಸಂದರ್ಭದಲ್ಲಿ ನಡೆದ ಗಲಾಟೆಯನ್ನು ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ಮಾಡಿದ ಘಟನೆ ಶುಕ್ರವಾರ ನಡೆದಿದೆ.ಸಾರ್ವಜನಿಕರು ಹಾಗೂ ಪೊಲೀಸರ ನಡುವೆ ನಡೆದ ಘರ್ಷಣೆಯಲ್ಲಿ ಜಾಲಹಳ್ಳಿ ಪಿಎಸ್‌ಐ ಎಚ್.ಬಿ.       ಸಣ್ಣಮನಿ ಮತ್ತು ಇಬ್ಬರು  ಪೊಲೀಸ್ ಪೇದೆಗಳು ಗಾಯಗೊಂಡಿದ್ದಾರೆ. ಪೊಲೀಸ್ ಇಲಾಖೆಗೆ ಸೇರಿದ ವ್ಯಾನಿನ ಗಾಜನ್ನು ಒಡೆದು ಹಾಕಲಾಗಿದೆ. ಘಟನೆಗೆ ಕಾರಣರಾದ ಗ್ರಾಮ ಪಂಚಾಯಿತಿ ಸದಸ್ಯ ಬಸವರಾಜ ಸೇರಿ 23 ಜನರನ್ನು ಪೊಲೀಸರು ಬಂಧಿಸಿದ್ದಾರೆ.ಅಧ್ಯಕ್ಷ ಭೀಮಣ್ಣ ಚಿಂಚರಕಿ ಹಾಗೂ ಉಪಾಧ್ಯಕ್ಷೆ ಹನುಮಂತಿ ಜೋಡಳ್ಳಿ ಇವರ ವಿರುದ್ಧ ಅವಿಶ್ವಾಸ ಮಂಡಿಸಲು ಶುಕ್ರವಾರ ಗ್ರಾಮ ಪಂಚಾಯತಿ ಕಚೇರಿಯಲ್ಲಿ ಸಭೆ ಕರೆಯಲಾಗಿತ್ತು. ಆಗ ಬಸವರಾಜ ಹಾಗೂ ಎಚ್.ಬಿ. ಸಣ್ಣಮನಿ ನಡುವೆ ಮಾತಿನ ಚಕಮಕಿ ನಡೆಯಿತು. ಬಳಿಕ ಗಲಾಟೆ ನಡೆದು ಲಾಠಿ ಪ್ರಹಾರ ಮಾಡಲಾಯಿತು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.