ಅವ್ಯವಸ್ಥೆ ಸರಿಪಡಿಸಲು ಆಗ್ರಹ

ಗುರುವಾರ , ಜೂಲೈ 18, 2019
27 °C

ಅವ್ಯವಸ್ಥೆ ಸರಿಪಡಿಸಲು ಆಗ್ರಹ

Published:
Updated:

ಮುಳಬಾಗಲು:  ತಾಲ್ಲೂಕಿನ ಮಲ್ಲನಾಯಕನಹಳ್ಳಿ ಗ್ರಾಮದಲ್ಲಿರುವ ಕಸ್ತೂರ್ಬಾ ಗಾಂಧಿ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಹಿಂದೂ ಯುವ ಶಕ್ತಿ ಸಂಘಟನೆಯ ಕಾರ್ಯಕರ್ತರು ಶುಕ್ರವಾರ ಸಂಜೆ ದಿಢೀರ್ ಭೇಟಿ ನೀಡಿ ವಿದ್ಯಾರ್ಥಿಗಳಿಂದ ಅವ್ಯವಸ್ಥೆ ಕುರಿತು ಮಾಹಿತಿ ಪಡೆದರು.ಹಿರಿಯ ಅಧಿಕಾರಿಗಳು ಶೀಘ್ರ ಇತ್ತ ಗಮನ ಹರಿಸಿ ಸಮಸ್ಯೆ ಪರಿಹರಿಸಬೇಕು ಎಂದು ಆಗ್ರಹಿಸಿದರು.ಹಾಸ್ಟೆಲ್‌ನಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಸರಿಯಿಲ್ಲ. ಸ್ನಾನಕ್ಕೆ ಮತ್ತು ಬಟ್ಟೆ ಒಗೆಯಲೂ ಅಗತ್ಯ ಪ್ರಮಾಣದ ನೀರು ಲಭ್ಯವಿರುವುದಿಲ್ಲ. ಹಾಸ್ಟೆಲ್‌ನಲ್ಲಿರುವ 8, 9, 10ನೇ ತರಗತಿ ಬಾಲಕಿಯರು ನರಕಯಾತನೆ ಅನುಭವಿಸುವಂತಾಗಿದೆ ಬಾಲಕಿಯರು, ಹಿಂದೂ ಯುವ ಶಕ್ತಿ ಸಂಘಟನೆಯ ಅಧ್ಯಕ್ಷ  ಮಂಜು ಹಾಗೂ ಹಿಂದೂ ಯುವಶಕ್ತಿ ಕಾರ್ಯಕರ್ತರ ಬಳಿ ಅಳಲು ತೋಡಿಕೊಂಡರು.ಕಾಯಿಲೆಯಿಂದ ಬಳಲುತ್ತಿರುವ ಮಕ್ಕಳಿಗೆ ಚಿಕಿತ್ಸೆ ಕೊಡಿಸಲು ಕರೆದೊಯ್ದರು. ಗ್ರಾಮದ ಬಾಲಕಿಯರ ವಸತಿ ನಿಲಯದಲ್ಲಿಯೂ ಇದೇ ಪರಿಸ್ಥಿತಿ ಇದೆ ಎಂದರು.ಹಿಂದೂ ಯುವ ಶಕ್ತಿ ಸಂಘಟನೆಯ ತಾಲ್ಲೂಕು ಘಟಕದ ಅಧ್ಯಕ್ಷ ಮಂಜು, ಮುಖಂಡರಾದ ದೊಮ್ಮಸಂದ್ರ ನಾರಾಯಣಸ್ವಾಮಿ, ಹರಿ, ಹರಿನಾಥರೆಡ್ಡಿ, ಬಾಲಾಜಿ,  ವಿನೋದ್, ರಘು, ಸತೀಶ್, ನೇತಾಜಿ ನಗರ ಪ್ರಶಾಂತ್ ಇತರರು ಪಾಲ್ಗೊಂಡಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry