ಮಂಗಳವಾರ, ಮೇ 11, 2021
25 °C

ಅವ್ಯವಹಾರ ಆರೋಪ: ಜೆಡಿಎಸ್ ಧರಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲಾರ: ತಾಲೂಕಿನ ಬೆಗ್ಲಿಹೋಸಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ವ್ಯಾಪಕ ಭ್ರಷ್ಟಾಚಾರ ಆಗಿದೆ ಎಂದು ಆರೋಪಿಸಿ ಜೆಡಿಎಸ್ ಕಾರ್ಯಕರ್ತರು ಹಾಗೂ ರೈತ ಮುಖಂಡರು ಪಂಚಾಯಿತಿ ಕಚೇರಿಗೆ ಶುಕ್ರವಾರ ಬೀಗ ಜಡಿದು ಪ್ರತಿಭಟಿಸಿದರು.ಚೋಳಘಟ್ಟ ಗ್ರಾಮದಲ್ಲಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಮಾಡಿರುವ ಕಾಮಗಾರಿಗಳನ್ನು ಪರಿಶೀಲಿಸಿರುವ ಜಿಲ್ಲಾ ಮಟ್ಟದ ಅಧಿಕಾರಿಗಳು ಹಣ ಬಿಡುಗಡೆ  ಮಾಡುವಂತೆ ಪಂಚಾಯಿತಿ ಅಧಿಕಾರಿಗಳಿಗೆ ಆದೇಶ ನೀಡಿದ್ದರೂ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.ಗ್ರಾಮದಲ್ಲಿ ಕುಡಿಯುವ ನೀರು ಪೂರೈಕೆ ಸಮರ್ಪಕವಾಗಿಲ್ಲ. ಆದರೆ ಹಣ ಮಾತ್ರ ಬಳಕೆಯಾಗಿದೆ. ಬಡವರಿಗೆ ಮನೆಗಳ ವಿತರಣೆಯಲ್ಲೂ ಕಾನೂನುಗಳನ್ನು ಉಲ್ಲಂಘಿಸಲಾಗಿದೆ.  ಗ್ರಾ.ಪಂ ಅಧ್ಯಕ್ಷರು  ಮತ್ತು ಕಾರ್ಯದರ್ಶಿ ಶಾಮೀಲಾಗಿ ಲಕ್ಷಾಂತರ ರೂಪಾಯಿ ಲಪಟಾಯಿಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.ಛತ್ರಕೋಡಿಹಳ್ಳಿ ರಾಮಕೃಷ್ಣೇಗೌಡ, ಉದ್ಯೋಗ ಖಾತ್ರಿ ಯೋಜನೆ, ನೀರು ಸರಬರಾಜು ಯೋಜನೆಯಲ್ಲಿ ಹಣ ದುರುಪಯೋಗ, ವಸತಿ ಯೋಜನೆಯಲ್ಲಿ ತಾರತಮ್ಯ ನಡೆದಿದೆ ಎಂದು   ಆರೋಪಿಸಿದರು.ಮೀನಾ ಭೇಟಿ: ಧರಣಿ ಮಾಹಿತಿ ಪಡೆದು ಸ್ಥಳಕ್ಕೆ ಬಂದ ಜಿಲ್ಲಾಧಿಕಾರಿ ಮನೋಜ್‌ಕುಮಾರ್ ಮೀನಾ, ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ರಾಜೇಂದ್ರ ಚೋಳನ್, ಪಂಚಾಯಿತಿ ಕಾರ್ಯದರ್ಶಿಯಿಂದ ಮಾಹಿತಿ ಪಡೆದು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್‌ನಿವಾಸ್ ಸಫೆಟ್ ಉಪಸ್ಥಿತರಿದ್ದರು.ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷ ಮೂರಾಂಡಹಳ್ಳಿ ಗೋಪಾಲ್, ಚೋಳಘಟ್ಟ ಶ್ರೀನಿವಾಸ್, ಪಿಎಲ್‌ಡಿ ಬ್ಯಾಂಕ್ ನಿರ್ದೇಶಕ ಛತ್ರಕೋಡಿಹಳ್ಳಿ ಶ್ರೀರಾಮರೆಡ್ಡಿ, ಗ್ರಾ.ಪಂ.ಸದಸ್ಯರಾದ ಚನ್ನಪ್ಪ, ಮುನಿಯಪ್ಪ, ಕೂಟೇರಿ ಕೆಂಪಣ್ಣ, ನಾಗರಾಜ್, ಸತೀಶ, ಕೃಷ್ಣಮೂರ್ತಿ ಪಾಲ್ಗೊಂಡಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.