ಬುಧವಾರ, ಮೇ 12, 2021
26 °C

ಅವ್ಯವಹಾರ: ವಿಶೇಷ ಸಭೆಗೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಿಬಿಎಂಪಿಯಲ್ಲಿ ನಡೆದಿರುವ ಅವ್ಯವಹಾರಗಳನ್ನು ಲೆಕ್ಕ ನಿಯಂತ್ರಕರು ಹಾಗೂ ಮಹಾಲೆಕ್ಕಪರಿಶೋಧಕರ (ಸಿಎಜಿ) ವರದಿ ಬಹಿರಂಗಪಡಿಸಿದ್ದು, ಈ ವಿಷಯವಾಗಿ ಚರ್ಚಿಸಲು ವಿಶೇಷ ಸಭೆ ಕರೆಯಬೇಕು ಎಂದು ಬಿಬಿಎಂಪಿ  ವಿರೋಧ ಪಕ್ಷದ ನಾಯಕ ಎಂ.ಕೆ. ಗುಣಶೇಖರ್ ಒತ್ತಾಯಿಸಿದರು.ಸೋಮವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, `ಬಿಬಿಎಂಪಿಯಲ್ಲಿ ಬಿಜೆಪಿ ನಡೆಸಿದ ಕರ್ಮಕಾಂಡವೇ  ಸಿಎಜಿ ವರದಿಯಲ್ಲಿ ಪ್ರತಿಬಿಂಬಿತವಾಗಿದೆ' ಎಂದು ಆರೋಪಿಸಿದರು.`ಸಿಎಜಿ ವರದಿ ಪ್ರಕಾರ ಬಿಬಿಎಂಪಿಗೆ ರೂ 140 ಕೋಟಿಯಷ್ಟು ನಷ್ಟ ಉಂಟಾಗಿದೆ. ಈ ನಷ್ಟಕ್ಕೆ ಯಾರು ಹೊಣೆ ಮತ್ತು ಅದನ್ನು ತುಂಬಿ ಕೊಡುವವರು ಯಾರು' ಎಂದು ಪ್ರಶ್ನಿಸಿದರು.`ಸಿಎಜಿ ವರದಿ ವಿಧಾನ ಮಂಡಲದಲ್ಲಿ ಮಂಡನೆಯಾಗಿದ್ದು, ಅದನ್ನು ಸಾರ್ವಜನಿಕ ಲೆಕ್ಕಪತ್ರ ಸಮಿತಿ ಪರಿಶೀಲಿಸಿ ಕ್ರಮ ಕೈಗೊಳ್ಳಲು ವಿಳಂಬವಾಗುತ್ತದೆ. ಹೀಗಾಗಿ ಬಿಬಿಎಂಪಿ ಈ ಸಂಬಂಧ ಶೀಘ್ರ ಕ್ರಮ ಜರುಗಿಸುವ ಅಗತ್ಯವಿದೆ' ಎಂದು ಪ್ರತಿಪಾದಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.