ಭಾನುವಾರ, ಏಪ್ರಿಲ್ 18, 2021
33 °C

ಅವ್ಯಾಹತ ವಲಸೆ: ರಾಜ್ಯಪಾಲರಿಗೆ ಕಾಂಗ್ರೆಸ್ ದೂರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು:ಈಶಾನ್ಯ ರಾಜ್ಯಗಳ ಜನತೆ ಅಭದ್ರ ಭಾವದಿಂದ ಬೆಂಗಳೂರು ತೊರೆಯುತ್ತಿರುವುದು ಮತ್ತು ಮಂಗಳೂರಿನ `ಮಾರ್ನಿಂಗ್ ಮಿಸ್ಟ್~ ಹೋಂಸ್ಟೇ ಮೇಲೆ ನಡೆದ ದಾಳಿ ಕುರಿತು ಚರ್ಚಿಸಲು, ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ನೇತೃತ್ವದ ಕಾಂಗ್ರೆಸ್ ನಿಯೋಗ ರಾಜ್ಯಪಾಲ ಎಚ್.ಆರ್. ಭಾರದ್ವಾಜ್ ಅವರನ್ನು ಶನಿವಾರ `ರಾಜಭವನ~ದಲ್ಲಿ ಭೇಟಿ ಮಾಡಿತು.ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ಕೋಮು ಸೌಹಾರ್ದತೆಗೆ ಧಕ್ಕೆ ಉಂಟಾಗಿದೆ. ಅಸ್ಸಾಂ ರಾಜ್ಯದ ವಿಧಾನಸಭೆಗೆ ಮುಂದೆ ಬರಲಿರುವ ಚುನಾವಣೆಯನ್ನು ಗಮನದಲ್ಲಿ ಇಟ್ಟುಕೊಂಡು, ಆ ರಾಜ್ಯದ ಜನತೆಯ ಮನದಲ್ಲಿ ಭೀತಿ ಸೃಷ್ಟಿಸಲಾಗುತ್ತಿದೆ ಎಂದು ರಾಜ್ಯಪಾರಿಗೆ ಸಲ್ಲಿಸಿರುವ ದೂರಿನಲ್ಲಿ ಕಾಂಗ್ರೆಸ್ ಆರೋಪಿಸಿದೆ.`ಬೆಂಗಳೂರಿನಲ್ಲಿ 10 ದಿನಗಳ ಅಂತರದಲ್ಲಿ 15 ಕೊಲೆ ನಡೆದಿದೆ. ಕಾನೂನು ಸುವ್ಯವಸ್ಥೆ ಕುಸಿದಿದೆ.

ಅಮಾಯಕರಿಗೆ ರಕ್ಷಣೆ ನೀಡುವುದು ಸರ್ಕಾರದ ಕರ್ತವ್ಯ ಎಂಬ ಸೂಚನೆಯನ್ನು ನೀಡಬೇಕು~ ಎಂದು ರಾಜ್ಯಪಾಲರನ್ನು ಕೋರಲಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.