ಅಶುದ್ಧ ನೀರು ಪೂರೈಕೆ; ಪರಿಶೀಲನೆ
ಕುಣಿಗಲ್: ಪಟ್ಟಣದ ವ್ಯಾಪ್ತಿಯಲ್ಲಿ ಕುಣಿಗಲ್ ದೊಡ್ಡಕೆರೆಯಿಂದ ಶುದ್ಧೀಕರಿಸಿ ಪೂರೈಸಲಾಗುತ್ತಿರುವ ನೀರು ಕುಡಿಯಲು ಯೋಗ್ಯವಾಗಿಲ್ಲ ಎಂದು ಸಾರ್ವಜನಿಕರು ನೀಡಿದ ದೂರಿನ ಹಿನ್ನೆಲೆಯಲ್ಲಿ ಪುರಸಭೆ ಉಪಾಧ್ಯಕ್ಷ ರಂಗಸ್ವಾಮಿ ಹಾಗೂ ಮುಖ್ಯಾಧಿಕಾರಿ ಗೋವಿಂದಯ್ಯ ಘಟಕಕ್ಕೆ ಶನಿವಾರ ಭೇಟಿ ನೀಡಿ ಪರಿಶಿಲಿಸಿದರು.
ಪಟ್ಟಣದ ದೊಡ್ಡಕೆರೆ ನೀರನ್ನು ಪುರಸಭಾ ವ್ಯಾಪ್ತಿಯಲ್ಲಿನ ವಿವಿಧ ವಾರ್ಡ್ಗಳಿಗೆ ಕುಡಿಯುವ ನೀರನ್ನು ಕಳೆದ ಕೆಲವು ದಿನಗಳಿಂದ ಸರ್ಮಪಕವಾಗಿ ಶುದ್ಧೀಕರಿಸದೆ ಪೂರೈಸಲಾಗುತ್ತಿದೆ ಎಂದು ಜನತೆ ಮುಖ್ಯಾಧಿಕಾರಿಗಳನ್ನು ತರಾಟಗೆ ತೆಗೆದುಕೊಂಡರಲ್ಲದೆ ಕೂಡಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ಪುರಸಭಾ ಉಪಾಧ್ಯಕ್ಷ ನೀರು ಶುದ್ದೀಕರಣ ಘಟಕಕ್ಕೆ ಭೇಟಿ ನೀಡಿ ಪರಿಶೀಲಿಸಿ, ಸಧ್ಯಕ್ಕೆ ಉಸ್ತುವಾರಿ ಅಗತ್ಯ ಸಿಬ್ಬಂದಿ ಇಲ್ಲದ ಕಾರಣ ಸಮಸ್ಯೆಯಾಗಿದೆ ಎಂದು ಗುತ್ತಿಗೆದಾರರ ಕಡೆಯ ಸಿಬ್ಬಂದಿ ಶಂಕರ್ ಹೇಳಿದರು. ಮುಖ್ಯಾಧಿಕಾರಿ ಈ ನಿಟ್ಟನಲ್ಲಿ ಜಿಲ್ಲಾಧಿಕಾರಿಗಳಿಗೆ ಕೂಡಲೆ ಪತ್ರ ಬರೆದು ಅಗತ್ಯ ಕ್ರಮಕೈಗೊಳ್ಳುವವರೆಗೂ ಇರುವ ಸಿಬ್ಬಂದಿ ಕುಡಿಯುವ ನೀರನ್ನು ಸಮರ್ಪಕ ಶುದ್ಧೀಕರಿಸಿ ಪೂರೈಸುವಂತೆ ತಾಕೀತು ಮಾಡಿದರು. ಕಿರಿಯ ಅಭಿಯಂತರ ಶ್ರೀಕಾಂತ್ಗೆ ಕಾಲಕಾಲಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಸೂಚನೆ ನೀಡಿದರು. ಪುರಸಸಭಾ ಸದಸ್ಯರಾದ ಹಮೀದ್, ಕೆ.ರಮೇಶ್, ಸಿಬ್ಬಂದಿ ಭೈರಪ್ಪ ಇತರರು ಉಪಸ್ಥಿತರಿದ್ದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.