ಸೋಮವಾರ, ಮೇ 23, 2022
24 °C

ಅಶ್ವಿನಿ ಅಂಗಡಿಗೆ ಸನ್ಮಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬೆಂಗಳೂರು ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯು ವಿಶ್ವಸಂಸ್ಥೆಯಿಂದ `ಗಾರ್ಡನ್ ಬ್ರೌನ್' ಯುವ ಸಾಧಕ ಪ್ರಶಸ್ತಿ ಪಡೆದ ಅಶ್ವಿನಿ ಅಂಗಡಿ ಅವರನ್ನು ನಗರದಲ್ಲಿ ಬುಧವಾರ ಸನ್ಮಾನಿಸಿತು.ಯುವ ಕಾಂಗ್ರೆಸ್ ಅಧ್ಯಕ್ಷ ಎಸ್.ಮನೋಹರ್ ಮಾತನಾಡಿ, `ಅಂಗವಿಕಲರಿಗೂ ಸಮಾಜದಲ್ಲಿ ಸಮಾನ ಅವಕಾಶಗಳನ್ನು ಕಲ್ಪಿಸಬೇಕು. ಅವರಲ್ಲಿಯೂ ಅನೇಕ ಪ್ರತಿಭೆಗಳಿವೆ. ಅವುಗಳನ್ನು ಗುರುತಿಸುವ ಕಾರ್ಯವಾಗಬೇಕು' ಎಂದರು.`ಸಾಧನೆಗೆ ಯಾವ ಅಂಗವೈಕಲ್ಯತೆಯೂ ಅಡ್ಡಿಯಾಗುವುದಿಲ್ಲ ಎಂಬುದನ್ನು ಮನಗಾಣಬೇಕು. ಇಂತಹ ಅನೇಕ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಕಾರ್ಯವಾಗಬೇಕು' ಎಂದು ಹೇಳಿದರು.ಪೀಠದಿಂದ ಸನ್ಮಾನ: ಅಶ್ವಿನಿ ಅಂಗಡಿಯವರನ್ನು ಕೂಡಲ ಸಂಗಮ ಪಂಚಮಸಾಲಿ ಪೀಠದ ಬಸವ ಮೃತ್ಯುಂಜಯ ಸ್ವಾಮೀಜಿ ಅವರು ನಗರದಲ್ಲಿ ನಡೆದ ಸರಳ ಸಮಾರಂಭದಲ್ಲಿ ಬುಧವಾರ ಸನ್ಮಾನಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.