ಸೋಮವಾರ, ಅಕ್ಟೋಬರ್ 21, 2019
25 °C

ಅಶ್ವಿನಿ ಮೇಲ್ಮನವಿ

Published:
Updated:

ಬೆಂಗಳೂರು: ಉದ್ದೀಪನ ಮದ್ದು ಪರೀಕ್ಷೆಯಲ್ಲಿ ಸಿಕ್ಕಿಬಿದ್ದ ಕಾರಣ ತಮ್ಮ ಮೇಲೆ ಹೇರಲಾಗಿರುವ ಒಂದು ವರ್ಷ ನಿಷೇಧ ಶಿಕ್ಷೆ ವಿರುದ್ಧ ಅಥ್ಲೀಟ್ ಅಶ್ವಿನಿ ಅಕ್ಕುಂಜೆ ಮೇಲ್ಮನವಿ ಸಲ್ಲಿಸಿದ್ದಾರೆ.ಇದನ್ನು ಅವರು ಗುರುವಾರ `ಪ್ರಜಾವಾಣಿ~ಗೆ ಖಚಿತಪಡಿಸಿದ್ದಾರೆ. ಅವರ ಜೊತೆ ಇನ್ನೂ ಮೂವರು ಅಥ್ಲೀಟ್ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಶಿಕ್ಷೆ ವಿಧಿಸಿರುವ ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಘಟಕಕ್ಕೆ (ನಾಡಾ) ಮೇಲ್ಮನವಿ ಸಲ್ಲಿಸಿದ್ದಾರೆ.`ಈ ಪ್ರಕರಣದಲ್ಲಿ ನಮ್ಮ ತಪ್ಪು ಇಲ್ಲ ಎಂದು ವಿಚಾರಣಾ ವರದಿ ಹೇಳಿದೆ. ಹೀಗಿದ್ದರೂ ಈ ಶಿಕ್ಷೆ ಏಕೆ~ ಎಂದು ಅಶ್ವಿನಿ ಪ್ರಶ್ನಿಸಿದ್ದಾರೆ.

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

Post Comments (+)