ಶುಕ್ರವಾರ, ಮೇ 14, 2021
31 °C

ಅಸಂಘಟಿತ ಕಾರ್ಮಿಕರ ಸಂಘಟನೆಯೇ ಸವಾಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: `ಅಸಂಘಟಿತ ಕಾರ್ಮಿಕರಿಗಾಗಿ ರೂಪಿಸಿರುವ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಮತ್ತು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು ಕಾರ್ಮಿಕರಿಗೆ ನೀಡಲಾಗಿರುವ ಸೌಲಭ್ಯಗಳ ಬಗ್ಗೆ ಹೆಚ್ಚಿನ ಮಾಹಿತಿ ನೀಡಲಿದೆ~ ಎಂದು ಕಾರ್ಮಿಕ ಆಯುಕ್ತ ಎಸ್. ಆರ್.ಉಮಾಶಂಕರ್ ತಿಳಿಸಿದರು.

ನ್ಯಾಷನಲ್ ಸೆಂಟರ್ ಫಾರ್ ಲೇಬರ್ ಸಂಸ್ಥೆಯು ನಗರದಲ್ಲಿ ಗುರುವಾರ ಆಯೋಜಿಸಿದ್ದ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತೆ ಕುರಿತ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

`ಕೇಂದ್ರ ಸರ್ಕಾರವು 12ನೇ ಪಂಚವಾರ್ಷಿಕ ಯೋಜನೆಯಲ್ಲಿ ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆಯನ್ನು ಒದಗಿಸುವತ್ತ  ಚಿಂತನೆ ನಡೆಸಿದೆ. ಅಸಂಘಟಿತ ಕಾರ್ಮಿಕರನ್ನು ಸಂಘಟಿಸುವುದೇ ಒಂದು ದೊಡ್ಡ ಸವಾಲು~ ಎಂದರು.

` ಅಸಂಘಟಿತ ಕಾರ್ಮಿಕರಿಗೆ ನೀಡಲಾಗಿರುವ ಪಿಂಚಣಿ ಮತ್ತು ಜೀವ ವಿಮಾ ನಿಗಮದಂತಹ ಯೋಜನೆಗಳಲ್ಲಿ ಇನ್ನಷ್ಟು ಸುಧಾರಣೆ ತರಲು ಇಲಾಖೆಯು ಪ್ರಯತ್ನ ನಡೆಸಲಿದೆ~ ಎಂದು ಭರವಸೆ ನೀಡಿದರು.

ಎನ್‌ಸಿಎಲ್‌ನ ಪ್ರಧಾನ ಕಾರ್ಯದರ್ಶಿ ಎನ್.ಪಿ. ಸಾಮಿ,~ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ನಿಗದಿಪಡಿಸಿರುವ ನಿವೃತ್ತಿಯ ಮಿತಿಯನ್ನು ಪುರುಷರಿಗೆ 58 ವರ್ಷ ಮತ್ತು ಮಹಿಳಾ ಕಾರ್ಮಿಕರಿಗೆ 55 ವರ್ಷಕ್ಕೆ ವಿಸ್ತರಿಸಬೇಕು~ ಎಂದರು.

ಸಂಘಟನಾ ಕಾರ್ಯದರ್ಶಿ ಎ.ಎಸ್.ಜೀವಾನಂದ, ಜಂಟಿ ಕಾರ್ಯದರ್ಶಿ ಸೂಸೈರಾಜ್, ಉಪಾಧ್ಯಕ್ಷೆ ಡಾ.ರೂತ್ ಮನೋರಮಾ ಇತರರು ಉಪಸ್ಥಿತರಿದ್ದರು. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.