ಅಸಂಘಟಿತ ಕಾರ್ಮಿಕರ ಹಕ್ಕು ರಕ್ಷಣೆಗೆ ಜನಸಂಸತ್ ಚಾಲನೆ

7

ಅಸಂಘಟಿತ ಕಾರ್ಮಿಕರ ಹಕ್ಕು ರಕ್ಷಣೆಗೆ ಜನಸಂಸತ್ ಚಾಲನೆ

Published:
Updated:
ಅಸಂಘಟಿತ ಕಾರ್ಮಿಕರ ಹಕ್ಕು ರಕ್ಷಣೆಗೆ ಜನಸಂಸತ್ ಚಾಲನೆ

ಬೆಂಗಳೂರು: `ದೇಶದ ಒಟ್ಟು ಕಾರ್ಮಿಕರಲ್ಲಿ ಶೇ 90ರಷ್ಟು ಮಂದಿ ಅಸಂಘಟಿತ ಕಾರ್ಮಿಕರಿದ್ದು, ಈ ವರ್ಗದ ಜನರು ತಮ್ಮ ಹಕ್ಕುಗಳಿಗೆ ಹೋರಾಟ ನಡೆಸುವಂತೆ ಜಾಗೃತಿ ಮೂಡಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ~ ಎಂದು ಸಾಮಾಜಿಕ ಹೋರಾಟಗಾರ್ತಿ ಮೇಧಾ ಪಾಟ್ಕರ್ ಹೇಳಿದರು.ಅಸಂಘಟಿತ ಕಾರ್ಮಿಕರ ಹಕ್ಕುಗಳ ಆಂದೋಲನ ಹಾಗೂ ಜನಾಂದೋಲನಗಳ ರಾಷ್ಟ್ರೀಯ ಸಮನ್ವಯ ಸಂಸ್ಥೆ ಆಶ್ರಯದಲ್ಲಿ ಶಿವಾಜಿನಗರದ ಆಟದ ಮೈದಾನದಲ್ಲಿ ಭಾನುವಾರ ನಡೆದ `ಜನಸಂಸತ್~ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. `ದೊಡ್ಡ ಸಂಖ್ಯೆಯಲ್ಲಿರುವ ಅಸಂಘಟಿತ ಕಾರ್ಮಿಕರು ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಈ ಕಾರ್ಮಿಕರ ಸಮಸ್ಯೆಗಳ ಕುರಿತು ದನಿ ಎತ್ತದ ಸಂಸದರನ್ನು ಪ್ರಶ್ನೆ ಮಾಡುವ ಮೂಲಕ ಕೇಂದ್ರ ಸರ್ಕಾರವನ್ನೇ ಪ್ರಶ್ನಿಸುವುದು ಜನಸಂಸತ್ ಕಾರ್ಯಕ್ರಮದ ಉದ್ದೇಶ. ದೇಶದ ಹಲವೆಡೆ ಈ ಕಾರ್ಯಕ್ರಮವನ್ನು ಆರಂಭಿಸಲಾಗಿದೆ~ ಎಂದರು. ನ್ಯಾಯವಾದಿ ಪ್ರೊ.ರವಿವರ್ಮ ಕುಮಾರ್, ಚಿಂತಕ ಇ.ಪಿ. ಮೆನನ್, ದಲಿತ ಸಂಘರ್ಷ ಸಮಿತಿ ಮುಖಂಡ ಎನ್.ವೆಂಕಟೇಶ್, ವಕೀಲ ನರಸಿಂಹಮೂರ್ತಿ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry