ಗುರುವಾರ , ಮೇ 19, 2022
24 °C

ಅಸಭ್ಯ ಭಾಷೆ ಬಳಕೆ: ಗ್ರೇಮ್ ಸ್ವಾನ್‌ಗೆ ದಂಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ತಗಾಂಗ್ (ಪಿಟಿಐ): ಬಾಂಗ್ಲಾದೇಶ ವಿರುದ್ಧದ ವಿಶ್ವಕಪ್ ಕ್ರಿಕೆಟ್ ‘ಬಿ’ ಗುಂಪಿನ ಲೀಗ್ ಪಂದ್ಯದಲ್ಲಿ ಶುಕ್ರವಾರ ಅಸಭ್ಯ ಭಾಷೆಯನ್ನು ಪ್ರಯೋಗಿಸಿದ ಇಂಗ್ಲೆಂಡ್ ತಂಡದ ಸ್ಪಿನ್ ಬೌಲರ್ ಗ್ರೇಮ್ ಸ್ವಾನ್‌ಗೆ ಪಂದ್ಯ ಸಂಭಾವನೆಯ ಶೇಕಡಾ ಹತ್ತರಷ್ಟು ಮೊತ್ತವನ್ನು ದಂಡವಾಗಿ ವಿಧಿಸಲಾಗಿದೆ.ಇಂಗ್ಲೆಂಡ್ ತಂಡವು ಎರಡು ವಿಕೆಟ್‌ಗಳ ಅಂತರದಿಂದ ಸೋಲನುಭವಿಸಿದ ಆ ಪಂದ್ಯದಲ್ಲಿ ಸ್ವಾನ್ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಆಟಗಾರರ ನೀತಿಸಂಹಿತೆಯ 2.1.4 ಪರಿಚ್ಛೇದದ ಅಡಿಯಲ್ಲಿ ಬರುವ ಮೊದಲ ಹಂತದ ಪ್ರಮಾದ ಮಾಡಿದ್ದಾರೆ. ಆದ್ದರಿಂದ ದಂಡ ಹೇರಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಐಸಿಸಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.ಐಸಿಸಿ ಅಂಪೈರ್ ಸಮಿತಿಯ ಸದಸ್ಯ ಹಾಗೂ ಮ್ಯಾಚ್ ರೆಫರಿ ಜೆಫ್ ಕ್ರೋವ್ ಅವರು ಸ್ವಾನ್ ‘ಈ ಅಂತರರಾಷ್ಟ್ರೀಯ ಪಂದ್ಯದಲ್ಲಿ ಅಸಭ್ಯವಾದ ಹಾಗೂ ಅವಮಾನಗೊಳಿಸುವಂಥ ಪದಗಳನ್ನು ಪ್ರಯೋಗಿಸಿದ್ದಾರೆ’ ಎಂದು ತೀರ್ಮಾನಕ್ಕೆ ಬಂದಿದ್ದಾರೆ. ಅದು ಖಚಿತವೂ ಆಗಿದೆ. ಆದ್ದರಿಂದ ವಿಚಾರಣೆ ನಡೆಸುವ ಅಗತ್ಯವೂ ಇಲ್ಲವೆಂದು ಸ್ಪಷ್ಟಪಡಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.