ಭಾನುವಾರ, ಮೇ 9, 2021
28 °C

`ಅಸಮತೋಲನ; ಹಸಿರೀಕರಣ ಅನಿವಾರ್ಯ'

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಾಗರ: ಹೆಚ್ಚುತ್ತಿರುವ ಪರಿಸರ ಅಸಮತೋಲನ ತಡೆಯಲು ವ್ಯಾಪಕವಾಗಿ ಹಸಿರೀಕರಣ ಕೈಗೊಳ್ಳುವುದು ಅನಿವಾರ್ಯ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ರವಿಶಂಕರ್ ಹೇಳಿದರು.ಇಲ್ಲಿನ ಅರಣ್ಯ ಇಲಾಖೆ ಈಚೆಗೆ ಹಮ್ಮಿಕೊಂಡಿದ್ದ ವಿಭಾಗಮಟ್ಟದ ಕೃಷಿ ಅರಣ್ಯ ಪ್ರೋತ್ಸಾಹ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಲೆನಾಡಿನಲ್ಲಿ ಹವಾಮಾನದ ವೈಪರೀತ್ಯ ಉಂಟಾಗುತ್ತಿರುವುದು ಅಪಾಯಕಾರಿ ಸೂಚನೆ. ಈ ಬಗ್ಗೆ ನಾವು ಈಗಲೇ ಎಚ್ಚೆತ್ತುಕೊಳ್ಳಬೇಕು ಎಂದು ಸಲಹೆ ನೀಡಿದರು.ವಿವಿಧ ಉದ್ದೇಶಗಳಿಗಾಗಿ ಅರಣ್ಯ ನಾಶ ನಿರಂತರವಾಗಿ ನಡೆಯುತ್ತಲೇ ಇದೆ. ಅದಕ್ಕೆ ಪರ್ಯಾಯವಾಗಿ ಅರಣ್ಯ ಇಲಾಖೆ ಪರಿಸರವನ್ನು ಸಂರಕ್ಷಿಸುವ ನಿಟ್ಟಿನಲ್ಲಿ ವಿವಿಧ ಯೋಜನೆ ಹಮ್ಮಿಕೊಳ್ಳಲಾಗುತ್ತಿದೆ. ಈ ಯೋಜನೆಗಳಿಗೆ ಸಾರ್ವಜನಿಕರ, ಸಂಘ ಸಂಸ್ಥೆಗಳ ಸಹಕಾರ ಇದ್ದಾಗ ಮಾತ್ರ ಯಶಸ್ಸು ಕಾಣಲು ಸಾಧ್ಯ ಎಂದು ಹೇಳಿದರು.ಕೃಷಿ ಅರಣ್ಯ ಪ್ರೋತ್ಸಾಹ ಯೋಜನೆ ಅಡಿ ರೈತರಿಗೆ ರಿಯಾಯಿತಿ ದರದಲ್ಲಿ ಸಸಿಗಳನ್ನು ವಿತರಿಸಲಾಗುವುದು. ಹೀಗೆ ವಿತರಿಸಲಾದ ಸಸಿಗಳನ್ನು ಪೋಷಿಸಿ ಸಂರಕ್ಷಿಸುವ ರೈತರಿಗೆ ಪ್ರೋತ್ಸಾಹ ಧನ ನೀಡಲಾಗುವುದು. ಗ್ರಾಮ ಅರಣ್ಯ ಸಮಿತಿಗಳ ಮೂಲಕ ಇಂತಹ ಯೋಜನೆಗಳ ಬಗ್ಗೆ ಮಾಹಿತಿ ನೀಡುವ ಮತ್ತು ಅರಿವು ಮೂಡಿಸುವ ಕೆಲಸ ನಡೆಯುತ್ತಿದೆ ಎಂದು ತಿಳಿಸಿದರು.ಭೀಮನಕೋಣೆ ಗ್ರಾಮದ ಅರಣ್ಯ ಸಮಿತಿ ಅಧ್ಯಕ್ಷ ಬಿ.ಎಚ್.ರಾಘವೇಂದ್ರ ಮಾತನಾಡಿ, ಹಸಿರೀಕರಣದಂತಹ ಯೋಜನೆಗಳನ್ನು ಅರಣ್ಯ ಇಲಾಖೆ ಪರಿಣಾಮಕಾರಿ ಆಗಿ ಅನುಷ್ಠಾನಗೊಳಿಸುವ ಮೂಲಕ ಜನಸ್ನೇಹಿ ಆಗುವ ಅವಕಾಶವಿದೆ ಎಂದು ಹೇಳಿದರು.ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ಲಿಂಗಪ್ಪ  ಅಧ್ಯಕ್ಷತೆವಹಿಸಿದ್ದರು.ಸೊರಬದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಚಂದ್ರಶೇಖರ್, ಚೈತನ್ಯ ರೂರಲ್ ಡೆವಲಪ್‌ಮೆಂಟ್ ಸಂಸ್ಥೆಯ ವಿನಾಯಕ್ ಬೇಳೂರು, ಕೃಷ್ಣಮೂರ್ತಿ, ರಾಮಚಂದ್ರ ಹಾಜರಿದ್ದರು. ರಾಮಕೃಷ್ಣಪ್ಪ ಸ್ವಾಗತಿಸಿದರು. ಕೃಷ್ಣೇಗೌಡ ಪ್ರಾಸ್ತಾವಿಕ ಮಾತನಾಡಿದರು. ಸುರೇಶ್ ವಂದಿಸಿದರು.ಅರ್ಜಿ ಆಹ್ವಾನ  

ತಾಲ್ಲೂಕು ಪಂಚಾಯ್ತಿ ಕಾರ್ಯಾಲಯವು ಹೊಸನಗರ ತಾಲ್ಲೂಕಿನಲ್ಲಿ ಬಿಸಿಎಂ ಇಲಾಖೆಯ ಮೆಟ್ರಿಕ್ ನಂತರದ ಬಾಲಕ- ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಪ್ರಸಕ್ತ ಸಾಲಿನಲ್ಲಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.ಪ್ರವೇಶ ಬಯಸುವ ಅಭ್ಯರ್ಥಿಗಳು ಪ್ರವರ್ಗ-1, 2ಎ, 2ಬಿ, 3ಎ, 3ಬಿ ಮತ್ತು ಪರಿಶಿಷ್ಟ ಜಾತಿ, ವರ್ಗಕ್ಕೆ ಸೇರಿದವರಾಗಿರಬೇಕು. ಪ್ರವರ್ಗ-1 ವಿದ್ಯಾರ್ಥಿಗಳಿಗೆ ರೂ 1,00,000, ಪ.ಜಾತಿ/ಪ. ಪಂಗಡಕ್ಕೆ  ಸೇರಿದ ವಿದ್ಯಾರ್ಥಿಗಳಿಗೆ ರೂ 2,00,000 ಹಾಗೂ 2ಎ, 2ಬಿ, 3ಎ, 3ಬಿ ಗೆ ಸೇರಿದ ವಿದ್ಯಾರ್ಥಿಗಳಿಗೆರೂ 44,500 ವಾರ್ಷಿಕ ಆದಾಯ ಮಿತಿಇರುತ್ತದೆ.ಅರ್ಹ ವಿದ್ಯಾರ್ಥಿಗಳು ಅರ್ಜಿಯನ್ನು ವಿಸ್ತರಣಾಧಿಕಾರಿ ಕಾರ್ಯಾಲಯ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಹೊಸನಗರ 08185- 221050  ಆಯಾ ಮೆಟ್ರಿಕ್ ನಂತರ ವಿದ್ಯಾರ್ಥಿನಿಲಯಗಳಿಂದ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಕಳೆದ ಸಾಲಿನಲ್ಲಿ ಉತ್ತೀರ್ಣರಾದ ದೃಢೀಕೃತ ಅಂಕಪಟ್ಟಿಯೊಂದಿಗೆ ಲಗತ್ತಿಸಿ ಜುಲೈ 10ರ ಒಳಗಾಗಿ ಸಲ್ಲಿಸಬೇಕು.   ವಿಸ್ತರಣಾಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಹೊಸನಗರ ಈ ವಿಳಾಸದಲ್ಲಿ ಸಂಪರ್ಕಿಸಬಹುದು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.