ಸೋಮವಾರ, ಜೂಲೈ 13, 2020
29 °C

ಅಸಮರ್ಪಕ ಪಡಿತರ: ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅಸಮರ್ಪಕ ಪಡಿತರ: ಪ್ರತಿಭಟನೆ

ಬಾಗೇಪಲ್ಲಿ: ನ್ಯಾಯಬೆಲೆ ಅಂಗಡಿಯಲ್ಲಿ ಪದಾರ್ಥಗಳನ್ನು ಅಸಮರ್ಪಕವಾಗಿ ವಿತರಿಸಲಾಗುತ್ತಿದೆ ಎಂದು ಆರೋಪಿಸಿ ತಾಲ್ಲೂಕಿನ ತುರುಕೇಶಪಲ್ಲಿ ಹಾಗೂ ಸುತ್ತಮುತ್ತಲಿನ ನೂರಾರು ಗ್ರಾಮಸ್ಥರು ಮಂಗಳವಾರ ತಾಲ್ಲೂಕು ಕಚೇರಿಗೆ ಬೀಗ ಜಡಿದು, ಕಚೇರಿ ಆವರಣದಲ್ಲೇ ಊಟ ಸಿದ್ಧಪಡಿಸಿ ಪ್ರತಿಭಟಿಸಿದರು.ಕಳೆದ ಮೂರ‌್ನಾಲ್ಕು ತಿಂಗಳಿನಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಆಹಾರ ಪದಾರ್ಥಗಳ ವಿತರಣೆ ಅಸ್ತವ್ಯಸ್ತವಾಗಿದೆ. ಸರ್ಕಾರದಿಂದ ಆಹಾರ ವಸ್ತುಗಳು ಪೂರೈಕೆಯಾಗಿದ್ದರೂ ಗ್ರಾಮಸ್ಥರಿಗೆ ವಿತರಿಸುತ್ತಿಲ್ಲ ಎಂದು ಗ್ರಾಮಸ್ಥ ರಮೇಶ್ ಆರೋಪಿಸಿದರು.|ಈ ಕುರಿತು ಹಿಂದೊಮ್ಮೆ ಹಿರಿಯ ಅಧಿಕಾರಿಗಳಿಗೆ ಮನವಿ ಪತ್ರ  ಸಲ್ಲಿಸಲಾಗಿತ್ತು.ಆದರೆ ಸಂಬಂಧಿಸಿದ ನ್ಯಾಯಬೆಲೆ ಅಂಗಡಿ ಮಾಲೀಕರ ವಿರುದ್ಧ ಯಾವುದೇ ಕ್ರಮ ಜರುಗಿಸಿಲ್ಲ. ತುರುಕೇಶಪಲ್ಲಿ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರಿಗೆ ವಿತರಣೆ ನಿಲ್ಲಿಸಲಾಗಿದೆ. ನ್ಯಾಯಬೆಲೆ ಅಂಗಡಿ ಮಾಲೀಕ ಹಾಗೂ ಆಹಾರ ಸರಬರಾಜು ಇಲಾಖೆ ಅಧಿಕಾರಿಗಳು ಈ ಕೃತ್ಯದಲ್ಲಿ ಶಾಮೀಲಾಗಿದ್ದಾರೆ ಎಂದು ಆರೋಪಿಸಿದರು.ಉಪ ತಹಶೀಲ್ದಾರ್ ನಾರಾಯಣಪ್ಪ, ಆಹಾರ ನಿರೀಕ್ಷಕ ನರಸಿಂಹಮೂರ್ತಿ ಹಾಗೂ ಸಬ್ ಇನ್ಸ್‌ಪೆಕ್ಟರ್ ಜೆ.ಎನ್.ಆನಂದ್‌ಕುಮಾರ್ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರ ಮನವೊಲಿಸಲು ಯತ್ನಿಸಿದರು.

ತುರುಕೇಶಪಲ್ಲಿ ಗ್ರಾಮದಲ್ಲಿನ ನ್ಯಾಯಬೆಲೆ ಅಂಗಡಿಯ ಹಾಲಿ ಪರವಾನಗಿಯನ್ನು ರದ್ದುಪಡಿಸಿ, ಬೇರೆಯವರಿಗೆ ಪರವಾನಗಿ ನೀಡಬೇಕೆಂದು ಧರಣಿ ನಿರತರು ಪಟ್ಟುಹಿಡಿದರು.]

ಹಿರಿಯ ಅಧಿಕಾರಿಗಳ ಬಳಿ ಚರ್ಚಿಸಿ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಅಧಿಕಾರಿಗಳು ಭರವಸೆ ನೀಡಿದ ಬಳಿಕ ಪ್ರತಿಭಟನೆ ವಾಪಸ್ ಪಡೆಯಲಾಯಿತು.ಮುಖಂಡರಾದ ಚೌಡಪ್ಪ, ರಾಜಶೇಖರ, ಕೃಷ್ಣಾರೆಡ್ಡಿ, ಆದಿರೆಡ್ಡಿ, ರಮೇಶ ಇತರರು ಭಾಗವಹಿಸಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.