ಭಾನುವಾರ, ಜೂನ್ 20, 2021
20 °C

ಅಸ್ಪೃಶ್ಯತೆ ವಿರುದ್ಧ ಪ್ರಚಾರಾಂದೋಲನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ರದುರ್ಗ: ಜಿಲ್ಲಾಡಳಿತ, ಸಮಾಜ ಕಲ್ಯಾ ಇಲಾಖೆ, ಹೊಳಲ್ಕೆರೆ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಹಾಗೂ ಶಿವಗಂಗ ಕುವೆಂಪು ಟ್ರಸ್ಟ್ ವತಿಯಿಂದ `ಆಸ್ಪೃಶ್ಯತೆ ಆಚರಣೆ ಶಿಕ್ಷಾರ್ಹ ಅಪರಾಧ~ ಕುರಿತು ಪ್ರಚಾರಾಂದೋಲನ ಕಾರ್ಯಕ್ರಮವನ್ನು ಜಿಲ್ಲೆಯ ವಿವಿಧೆಡೆ ಆಯೋಜಿಸಲಾಗಿತ್ತು.ಬೀದಿ ನಾಟಕಗಳನ್ನು ಪ್ರದರ್ಶಿಸಲಾಯಿತು. ಹೊಳಲ್ಕೆರೆ ತಾಲ್ಲೂಕಿನ ಕೆರೆಯಾಗಳಹಳ್ಳಿ ಮತ್ತು ತೇಕಲವಟ್ಟಿ ಗ್ರಾಮಗಳಲ್ಲಿ ಬೀದಿ ನಾಟಕಗಳನ್ನು ಉಪ್ಪರಿಗೇನಹಳ್ಳಿ ಗ್ರಾ.ಪಂ. ಉಪಾಧ್ಯಕ್ಷ ಕೆ. ರಾಜು ಉದ್ಘಾಟಿಸಿದರು.ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಅಧೀಕ್ಷಕ ಶ್ರೀನಿವಾಸ್, ಕುವೆಂಪು ಸಂಸ್ಥೆ ವ್ಯವಸ್ಥಾಪಕ ಡಿ.ವಿ. ಪ್ರಕಾಶ್, ತಾಲ್ಲೂಕು ಸಮಾಜ ಕಲ್ಯಾಣ ಅಧಿಕಾರಿ ನಾಗಚಂಪಾ, ಕಲಾವಿದರಾದ ಜಗದೀಶ್, ಪಾಂಡುರಂಗಪ್ಪ ಇದ್ದರು.

ಚಿದಾನಂದಪ್ಪ ಸ್ವಾಗತಿಸಿದರು. ಹುಲ್ಲೂರು ಕೃಷ್ಣಪ್ಪ ಕಾರ್ಯಕ್ರಮ ನಿರೂಪಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.