ಕೊಕ್ರಾಝಾರ್(ಪಿಟಿಐ): ಅಸ್ಸಾಂನ ಕೊಕ್ರಾಝಾರ್ ಜಿಲ್ಲೆಯ ಜನನಿಬಿಡ ಮಾರುಕಟ್ಟೆ ಪ್ರದೇಶದಲ್ಲಿ ಶುಕ್ರವಾರ ಮಧ್ಯಾಹ್ನ ಉಗ್ರರು ಗುಂಡಿನ ದಾಳಿ ನಡೆಸಿದ್ದು, 13 ನಾಗರಿಕರು ಮೃತಪಟ್ಟಿದ್ದಾರೆ. 20 ಮಂದಿ ತೀವ್ರ ಗಾಯಗೊಂಡಿದ್ದಾರೆ. ಒಬ್ಬ ಉಗ್ರನನ್ನು ಹೊಡೆದುರುಳಿಸಲಾಗಿದ್ದು, ಘಟನೆಯಲ್ಲಿ ಒಟ್ಟು 14 ಮಂದಿ ಬಲಿಯಾಗಿದ್ದಾರೆ.

ಕೊಕ್ರಾಝಾರ್ ಜಿಲ್ಲಾ ಕೇಂದ್ರದಿಂದ 12 ಕಿ.ಮೀ. ದೂರದಲ್ಲಿರುವ ಬಾಲಾಜಾನ್ ತಿನೈಲಿ ಮಾರುಕಟ್ಟೆಯಲ್ಲಿ ಉಗ್ರರ ಗುಂಪು ಮನ ಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ 13 ಮಂದಿ ಮೃತಪಟ್ಟು, 20 ಜನ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಾರುಕಟ್ಟೆ ಪ್ರದೇಶಕ್ಕೆ ಕಾರಿನಲ್ಲಿ ಬಂದಿರುವ ಉಗ್ರರರು ಗುಂಡಿನ ದಾಳಿ ನಡೆಸಿದ್ದಾರೆ. ಬಳಿಕ, ಭದ್ರತಾ ಸಿಬ್ಬಂದಿ ಪ್ರತಿ ದಾಳಿ ನಡೆಸಿ ಒಬ್ಬ ಉಗ್ರರನ್ನು ಹೊಡೆದುರುಳಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

13 ಶವಗಳನ್ನು ವಶಕ್ಕೆ ಪಡೆದಿರುವ ಪೊಲೀಸರು, ಉಗ್ರರ ಪತ್ತೆಗಾಗಿ ಶೋಧ ನಡೆಸಿದ್ದಾರೆ. ಉಗ್ರರು ಸಮೀಪ ಯಾವುದೋ ಕಟ್ಟದಲ್ಲಿ ಅಡಗಿ ಕುಳಿತಿರುವ ಸಾಧ್ಯತೆ ಇದೆ ಎನ್ನಲಾಗಿದೆ.

ಹಲವು ನಾಗರಿಕರು ತೀವ್ರ ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.