ಮಂಗಳವಾರ, ಜೂಲೈ 7, 2020
22 °C

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರ: ಸುಷ್ಮಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರ: ಸುಷ್ಮಾ

ಗುವಾಹಟಿ (ಪಿಟಿಐ): ಕಾಂಗ್ರೆಸ್ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಬಗ್ಗೆ ಜನತೆ ಬೇಸರಗೊಂಡಿರುವುದರಿಂದ ಈ ಬಾರಿ ಅಸ್ಸಾಂನಲ್ಲಿ ಬಿಜೆಪಿ ಸ್ವಂತ ಶಕ್ತಿಯಿಂದ ಸರ್ಕಾರ ರಚಿಸುವುದು ನಿಶ್ಚಿತ ಎಂದು ಪಕ್ಷದ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ ಹೇಳಿದ್ದಾರೆ.‘ಸ್ವಂತ ಶಕ್ತಿಯಿಂದ ಸರ್ಕಾರ ರಚಿಸುವುದು ನಮ್ಮ ಗುರಿ. ಬಿಹಾರದಲ್ಲಿ ನಾವು ಶೇ 99ರಷ್ಟು ಯಶಸ್ಸು ಗಳಿಸಿದ್ದೇವೆ. ಪಂಜಾಬ್‌ನಲ್ಲಿ 23ರಲ್ಲಿ 19 ಸ್ಥಾನಗಳನ್ನು ಗೆದ್ದಿದ್ದೇವೆ. ಜನ ನೀಡುವಾಗ ಉದಾರವಾಗಿಯೇ ನೀಡುತ್ತಾರೆ’ ಎಂದು ಅವರು ಮಂಗಳವಾರ ಇಲ್ಲಿ ಪತ್ರಕರ್ತರಿಗೆ ತಿಳಿಸಿದರು.ಚುನಾವಣಾ ಪೂರ್ವ ಹೊಂದಾಣಿಕೆ ಮಾಡಿಕೊಳ್ಳದ್ದರಿಂದ ಮತ ವಿಭಜನೆಯಾಗಿ ಕಾಂಗ್ರೆಸ್‌ಗೆ ಲಾಭವಾದೀತೇ ಎಂದು ಕೇಳಿದಾಗ, ಪ್ರತಿ ಬಾರಿಯೂ ಮತ ವಿಭಜನೆ ನಡೆಯಲೇಬೇಕೆಂದಿಲ್ಲ ಎಂದು ಸುಷ್ಮಾ ನುಡಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಬಗ್ಗೆ ಜನ ಭ್ರಮನಿರಸನಗೊಂಡಿದ್ದಾರೆ. ಇಲ್ಲಿ ಮತ ವಿಭಜನೆಗೊಳ್ಳದೆ ಒಗ್ಗೂಡಲಿದೆ ಎಂದು ಅವರು ವಿಶ್ಲೇಷಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.