ಶನಿವಾರ, ಏಪ್ರಿಲ್ 10, 2021
30 °C

ಅಸ್ಸಾಂ ಮೊದಲ ಹಂತದ ಚುನಾವಣೆಗೆ ಸಿದ್ಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುವಾಹಟಿ, (ಪಿಟಿಐ): ಅಸ್ಸಾಂನಲ್ಲಿ ಮೊದಲ ಹಂತದ ವಿಧಾನಸಭಾ ಚುನಾವಣೆಗಾಗಿ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿದ್ದು, 13 ಜಿಲ್ಲೆಗಳ 62 ಕ್ಷೇತ್ರಗಳಿಗೆ ಬಿಗಿ ಭದ್ರತೆಯ ನಡುವೆ ಸೋಮವಾರ ಚುನಾವಣೆ ನಡೆಯಲಿದೆ.ದೂರದ ಕ್ಷೇತ್ರಗಳಿಗೆ ನೇಮಕಗೊಂಡಿರುವ ಚುನಾವಣಾ ಸಿಬ್ಬಂದಿ ಶುಕ್ರವಾರದಂದೇ ಮತಗಟ್ಟೆಗಳಿಗೆ ತೆರಳಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.ಸಿಬ್ಬಂದಿಯನ್ನು ಸಾಗಿಸಲು ಬಸ್ಸು, ಎತ್ತಿನ ಬಂಡಿ ಹಾಗೂ ದೋಣಿಗಳ ವ್ಯವಸ್ಥೆ ಮಾಡಲಾಗಿದ್ದರೂ ಗುಡ್ಡಗಾಡು ಪ್ರದೇಶಗಳಿಗೆ ನೇಮಕಗೊಂಡ ಸಿಬ್ಬಂದಿ ಕಾಲ್ನಡಿಗೆಯಲ್ಲೇ ಸಾಗಿ ಕರ್ತವ್ಯ ನಿರ್ವಹಿಸಬೇಕಾಗಿದೆ.ಮುಖ್ಯಮಂತ್ರಿ ತರುಣ್ ಗೊಗೊಯ್ ಸೇರಿದಂತೆ 485 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಈ ಚುನಾವಣೆಯಲ್ಲಿ ನಿರ್ಧಾರವಾಗಲಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.