ಮಂಗಳವಾರ, ಏಪ್ರಿಲ್ 13, 2021
23 °C

ಅಸ್ಸಾಂ ಶಾಸಕಿ ಮೇಲೆ ಹಲ್ಲೆ: ಐವರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕರೀಮ್‌ಗಂಜ್ (ಪಿಟಿಐ): ಕಾಂಗ್ರೆಸ್ ಶಾಸಕಿ ರುಮಿ ನಾಥ್ ಮತ್ತು ಅವರ ಎರಡನೇ ಪತಿ ಜಾಕಿ ಜಕೀರ್ ಅವರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಅಸ್ಸಾಂ ಪೊಲೀಸರು ಭಾನುವಾರ ಐದು ಮಂದಿಯನ್ನು ಬಂಧಿಸಿದ್ದಾರೆ.`ಶಾಸಕಿ ಮೇಲೆ ನಡೆದ ಹಲ್ಲೆಯಲ್ಲಿ ಭಾಗಿಯಾಗಿದ್ದಾರೆ ಎಂದು ಅನುಮಾನ ವ್ಯಕ್ತವಾದ ಹಿನ್ನೆಲೆಯಲ್ಲಿ ಐವರನ್ನು ಬಂಧಿಸಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ~ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಪೂಜಾರಿ ತಿಳಿಸಿದ್ದಾರೆ.ಈ ಮಧ್ಯೆ ಗುವಾಹಟಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಾಸಕಿ ರುಮಿ ನಾಥ್ ಅವರು, `ನನ್ನ ಮೇಲಿನ ಹಲ್ಲೆಯು ರಾಜಕೀಯ ಪಿತೂರಿಯಾಗಿದೆ. ಹಲ್ಲೆಯಿಂದ ದೇಹದಲ್ಲಿ ಸಣ್ಣಪುಟ್ಟ ಗಾಯಗಳಾಗಿದ್ದು, ಆದಷ್ಟು ಬೇಗನೆ ಚೇತರಿಸಿಕೊಳ್ಳುತ್ತೇನೆ~ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.ಖಾಸಗಿ ಹೋಟೆಲ್‌ವೊಂದರಲ್ಲಿ ತಂಗಿದ್ದ ಶಾಸಕಿ ರುಮಿ ಮತ್ತು ಪತಿ ಜಾಕಿ ಜಕೀರ್ ಮೇಲೆ, ಶುಕ್ರವಾರ ರಾತ್ರಿ ಜನರ ಗುಂಪೊಂದು ಮೊದಲ ಪತಿಗೆ ವಿಚ್ಚೇದನ ನೀಡದೇ ಎರಡನೇ ವಿವಾಹವಾಗಿದ್ದಾರೆ ಎಂದು ಆರೋಪಿಸಿ ಹಲ್ಲೆ ನಡೆಸಿತ್ತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.