ಅ.9ರಿಂದ 20ರವರೆಗೆ ಶಾಲೆಗಳಿಗೆ ದಸರಾ ರಜೆ

7

ಅ.9ರಿಂದ 20ರವರೆಗೆ ಶಾಲೆಗಳಿಗೆ ದಸರಾ ರಜೆ

Published:
Updated:

ಮಡಿಕೇರಿ: ಪ್ರಾಥಮಿಕ ಮತ್ತು ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ದಸರಾ ರಜೆಯನ್ನು ಅಕ್ಟೋಬರ್ 9ರಿಂದ 20ರ ವರೆಗೆ ನೀಡಲು ಜಿಲ್ಲಾಧಿಕಾರಿ ಅನುರಾಗ್ ತಿವಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ದಸರಾ ಸಿದ್ಧತಾ ಪರಿಶೀಲನಾ ಸಭೆಯಲ್ಲಿ ತೀರ್ಮಾನಿಸಲಾಗಿದೆ.ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಕ್ಕಳ ದಸರಾ ಕಾರ್ಯಕ್ರಮದಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಪಾಲ್ಗೊಳ್ಳಲು ಅನುಕೂಲವಾಗಲಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಬಿ.ಎಚ್.ಬಸವರಾಜು ಅವರು ತಿಳಿಸಿದರು.ನಗರದ ಪ್ರವಾಸಿ ತಾಣವಾದ ರಾಜಾಸೀಟಿನಲ್ಲಿ ತಾತ್ಕಾಲಿಕವಾಗಿ ಸಂಗೀತ ಕಾರಂಜಿಗೆ ವ್ಯವಸ್ಥೆ ಮಾಡುವುದು ಹಾಗೂ ರಾಜಾಸೀಟಿಗೆ ನಿರಂತರ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.ನಗರಸಭೆ ಆಯುಕ್ತ ಎನ್.ಎಂ.ಶಶಿಕುಮಾರ್, ದಸರಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಮಂಜುನಾಥ್, ಖಜಾಂಜಿ ಚುಮ್ಮಿದೇವಯ್ಯ, ದಸರಾ ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಅನಿಲ್ ಎಚ್.ಟಿ, ದಶ ಮಂಟಪ ಸಮಿತಿಯ ಪ್ರಧಾನ ಕಾರ್ಯದರ್ಶಿ ಮಂಜುನಾಥ್, ಬಿಎಸ್ಎನ್ಎಲ್ ಸಹಾಯಕ ಕಾರ್ಯಪಾಲಕ ಅಭಿಯಂತರ ರವಿಕುಮಾರ್, ಸೆಸ್ಕ್ ಕಾರ್ಯಪಾಲಕ ಅಭಿಯಂತರ ಶ್ರೀನಾಥ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ವಸಂತ ಕುಮಾರ್, ಹಾಜರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry