ಬುಧವಾರ, ಏಪ್ರಿಲ್ 14, 2021
31 °C

ಆಂಜನೇಯಸ್ವಾಮಿ ಬ್ರಹ್ಮರಥೋತ್ಸವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಳಿಯಾರು: ಹೋಬಳಿಯ ದಸೂಡಿ ಗ್ರಾಮದ ಆಂಜನೇಯಸ್ವಾಮಿ ಬ್ರಹ್ಮರಥೋತ್ಸವ ಶುಕ್ರವಾರ ಮಧ್ಯಾಹ್ನ ಸಾವಿರಾರು ಭಕ್ತರು ಭಾಗವಹಿಸುವುದರೊಂದಿಗೆ ವಿಜೃಂಭಣೆಯಿಂದ ನಡೆಯಿತು. ಬೆಳಿಗ್ಗೆಯಿಂದಲೇ ಪೂಜಾ ವಿಧಾನ ಆರಂಭವಾಗಿ 12ಗಂಟೆಗೆ ಸ್ವಾಮಿಯನ್ನು ದೇವಾಲಯದ ಆವರಣದಲ್ಲಿ ಶೃಂಗಾರಗೊಳಿಸಿದ್ದ ರಥದಲ್ಲಿ ಕೂರಿಸಲಾಯಿತು. ನೆರೆದಿದ್ದ ಸಾವಿರಾರು ಭಕ್ತರು ಸುಡು ಬಿಸಿಲನ್ನು ಲೆಕ್ಕಿಸದೆ ವೇದ ಘೋಷಣೆಯೊಂದಿಗೆ ರಥವನ್ನು ಎಳೆದು ಪಾವನರಾದರು.ಕೆಲ ಭಕ್ತರು ರಥಕ್ಕೆ ಬಾಳೆಹಣ್ಣು ಎಸೆದರೆ, ಮತ್ತೆ ಕೆಲವರು ರಥಕ್ಕೆ ಹಣ್ಣು-ಕಾಯಿಯೊಂದಿಗೆ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ತಾ.ಪಂ. ಅಧ್ಯಕ್ಷ ಜಿ.ಆರ್.ಸೀತಾರಾಮಯ್ಯ, ಜಿ.ಪಂ.ಸದಸ್ಯೆ ನಿಂಗಮ್ಮ ರಾಮಯ್ಯ, ತಾ.ಪಂ. ಸದಸ್ಯರಾದ ಆರ್.ಪಿ.ವಸಂತಯ್ಯ, ಕೆಂಕೆರೆ ನವೀನ್, ದಸೂಡಿ ಗ್ರಾ.ಪಂ.ಅಧ್ಯಕ್ಷೆ ರೇಣುಕಮ್ಮ, ಗ್ರಾ.ಪಂ. ಮಾಜಿ ಅಧ್ಯಕ್ಷ ಡಿ.ಬಿ.ರವಿಕುಮಾರ್, ದೇವಾಲಯ ಸಮಿತಿ ಕನ್ವೀನಿಯರ್ ಆರ್.ರಂಗಸ್ವಾಮಿ ಹಾಗೂ ಧರ್ಮದರ್ಶಿಗಳು ಹಾಜರಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.