ಭಾನುವಾರ, ಜನವರಿ 26, 2020
18 °C

ಆಂತರಿಕ ಭದ್ರತೆ ಕುರಿತು ವಿಚಾರ ಸಂಕಿರಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ಆಂತರಿಕ ಭದ್ರತೆ ಕುರಿತು ರಾಷ್ಟ್ರಮಟ್ಟದ ವಿಚಾರಸಂಕಿರಣವು ನಗರದ ಜಿಎಂಐಟಿ ಕಾಲೇಜಿನಲ್ಲಿ ಫೆ. 22ರಿಂದ 24ರವರೆಗೆ ನಡೆಯಲಿದೆ.ಹಲವು ಭದ್ರತಾ ಸಂಸ್ಥೆಗಳ ಸಹಯೋಗದಲ್ಲಿ ಪೂರ್ವವಲಯ ಐಜಿಪಿ ಕಚೇರಿ ವತಿಯಿಂದ ಆಯೋಜಿಸಿರುವ ಈ ವಿಚಾರ ಸಂಕಿರಣದಲ್ಲಿ ದೇಶದ ಉನ್ನತ ಪೊಲೀಸ್ ಅಧಿಕಾರಿಗಳು, ಭದ್ರತಾ ವಿಭಾಗದ ಮುಖ್ಯಸ್ಥರು, ವಿವಿಧ ರಾಜ್ಯಗಳ ಡಿವೈಎಸ್‌ಪಿಗಳಿಂದ ಹಿಡಿದು ಆಯಾ ರಾಜ್ಯಗಳ ಪೊಲೀಸ್ ಮಹಾನಿರ್ದೇಶಕರು ಭಾಗವಹಿಸಲಿದ್ದಾರೆ ಎಂದು ಪೂರ್ವವಲಯ ಐಜಿಪಿ ಸಂಜಯ್ ಸಹಾಯ್ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.36 ಅತಿಗಣ್ಯ ಸಂಪನ್ಮೂಲ ವ್ಯಕ್ತಿಗಳು 9 ವಿವಿಧ ತಾಂತ್ರಿಕ ವಿಷಯಗಳ ಕುರಿತು ಮಹತ್ವದ ಉಪನ್ಯಾಸ ನೀಡಲಿದ್ದಾರೆ.

ಪ್ರತಿಕ್ರಿಯಿಸಿ (+)