ಆಂಧ್ರಕ್ಕೆ ನೀರು ರಾಜ್ಯ ಸಮ್ಮತಿ

7

ಆಂಧ್ರಕ್ಕೆ ನೀರು ರಾಜ್ಯ ಸಮ್ಮತಿ

Published:
Updated:

ಹೈದರಾಬಾದ್ (ಪಿಟಿಐ): ಅನಂತಪುರ ಜಿಲ್ಲೆಯ ಕುಡಿಯುವ ನೀರಿನ ಅಗತ್ಯ ಪೂರೈಸಲು 2.626 ಟಿಎಂಸಿ ನೀರು ಬಿಡಲು ಕರ್ನಾಟಕ ಸರ್ಕಾರ ಒಪ್ಪಿಕೊಂಡಿದೆ ಎಂದು ಆಂಧ್ರ ತಿಳಿಸಿದೆ.

ಮುಖ್ಯಮಂತ್ರಿ ಎನ್.ಕಿರಣ್ ಕುಮಾರ್ ರೆಡ್ಡಿ ಈ ಸಂಬಂಧ ಕರ್ನಾಟಕದ ಮುಖ್ಯಮಂತ್ರಿ ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ, ಕುಡಿಯುವ ನೀರಿನ 3  ಯೋಜನೆಗಳಿಗಾಗಿ ತುಂಗಭದ್ರಾ ಮಂಡಳಿಯು ನೀರು ಬಿಡಲು ಸಮ್ಮತಿಸಿದೆ.  ಅನಂತಪುರ ಪಟ್ಟಣ, ಸತ್ಯಸಾಯಿ ಗ್ರಾಮೀಣ ನೀರು ಸರಬರಾಜು ಮತ್ತು ಶ್ರೀರಾಮಿ ರೆಡ್ಡಿ ಯೋಜನೆಗಳಿಗೆ ಈ ನೀರನ್ನು ಬಳಸಿಕೊಳ್ಳಲಾಗುತ್ತದೆ ಎಂದು ಅಧಿಕೃತ ಹೇಳಿಕೆ ವಿವರಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry