ಗುರುವಾರ , ಮೇ 13, 2021
16 °C

ಆಂಧ್ರದ ಇಬ್ಬರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಳ್ಳಾರಿ: ಅಕ್ರಮವಾಗಿ ಸಾಗಿಸುತ್ತಿದ್ದ ಎರಡು ಟನ್ ಅಮೋನಿಯಂ ನೈಟ್ರೇಟ್ ಅನ್ನು ತಾಲ್ಲೂಕಿನ ಕುಡಿತಿನಿ ಗ್ರಾಮದ ಬಳಿ ಭಾನುವಾರ ಸಂಜೆ ವಶಪಡಿಸಿಕೊಂಡಿರುವ ಪೊಲೀಸರು, ಈ ಸಂಬಂಧ ಆಂಧ್ರಪ್ರದೇಶದ ಇಬ್ಬರನ್ನು ಬಂಧಿಸಿದ್ದಾರೆ.ಇದನ್ನು ಆಂಧ್ರದ ಅನಂತಪುರದಿಂದ ಗಂಗಾವತಿಯತ್ತ ಸರಕು ಸಾಗಣೆ ವಾಹನದಲ್ಲಿ ಸಾಗಿಸಲಾಗುತ್ತಿತ್ತು. ತಪಾಸಣೆ ಮಾಡಿದಾಗ ಸೂಕ್ತ ದಾಖಲೆಗಳು ಇರದಿದ್ದ ಕಾರಣ ಪೊಲೀಸರು  ಅಮೋನಿಯಂ ನೈಟ್ರೇಟ್‌ನ ತಲಾ 50 ಕೆಜಿ ತೂಕದ 40 ಚೀಲಗಳನ್ನು ವಾಹನ ಸಮೇತ ವಶಕ್ಕೆ ತೆಗೆದುಕೊಂಡರು.ಅನಂತಪುರದ ಗುರಪ್ಪ ಹಾಗೂ ಮೆಹಬೂಬ್ ಬಾಷಾ ಅವರನ್ನು ಬಂಧಿಸಲಾಗಿದೆ. ಈ ಕುರಿತು ಕುಡುತಿನಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ಮುಂದುವರಿದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಚಂದ್ರಗುಪ್ತ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.