ಆಂಧ್ರಪ್ರದೇಶದಲ್ಲಿ ರಾಷ್ಟ್ರಪತಿ ಆಳ್ವಿಕೆ ಇಲ್ಲ - ಕಾಂಗ್ರೆಸ್

7

ಆಂಧ್ರಪ್ರದೇಶದಲ್ಲಿ ರಾಷ್ಟ್ರಪತಿ ಆಳ್ವಿಕೆ ಇಲ್ಲ - ಕಾಂಗ್ರೆಸ್

Published:
Updated:

ನವದೆಹಲಿ (ಐಎಎನ್‌ಎಸ್): ಪ್ರತ್ಯೇಕ ತೆಲಂಗಾಣಕ್ಕೆ ಆಗ್ರಹಿಸಿ ಸತತವಾಗಿ ನಡೆಯುತ್ತಿರುವ ಚಳವಳಿಗಳಿಂದ ಜರ್ಝರಿತವಾಗಿರುವ ಆಂಧ್ರಪ್ರದೇಶದಲ್ಲಿ ರಾಷ್ಟ್ರಪತಿ ಆಡಳಿತ ವಿಧಿಸುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಆರೋಗ್ಯ ಸಚಿವ ಗುಲಾಂ ನಬಿ ಆಜಾದ್ ಅವರು ಶನಿವಾರ ಸ್ಪಷ್ಟಪಡಿಸಿದ್ದಾರೆ.ಆಂಧ್ರ ಪರಿಸ್ಥಿತಿ ಕುರಿತ ಉನ್ನತ ಮಟ್ಟದ ಸಭೆಯ ನಂತರ ಆಜಾದ್ ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. ಇನ್ನು ಒಂದೆರಡು ದಿನಗಳಲ್ಲಿ ತೆಲಂಗಾಣ ಸಮಸ್ಯೆಗೆ ಯಾವುದೇ ಪರಿಹಾರ ಕಂಡುಕೊಳ್ಳುವುದು ಸಾಧ್ಯವಿಲ್ಲ ಎಂದು ಅವರು ಇದೇ ವೇಳೆ ತಿಳಿಸಿದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry