ಬಳ್ಳಾರಿ: ರಾಜ್ಯದ ಗಡಿಯಲ್ಲಿರುವ ಆಂಧ್ರಪ್ರದೇಶದ ಕರ್ನೂಲು ಜಿಲ್ಲೆಯ ಆಲೂರು ತಾಲ್ಲೂಕಿನ ವಂದವಾಗಿಲು ಗ್ರಾಮದ ಕನ್ನಡ ಪ್ರಾಥಮಿಕ ಶಾಲೆಯ ವಜ್ರಮಹೋತ್ಸವ ಸಮಾರಂಭ ಇತ್ತೀಚೆಗೆ ನಡೆಯಿತು.

ಗ್ರಾಮದ ಕೃಷ್ಣ ಮತ್ತು ಮಹೇಶ್ಬಾಬು ಅಭಿಮಾನಿ ಸಂಘದ ವತಿಯಿಂದ ಶಾಲೆಯ ವಿದ್ಯಾರ್ಥಿಗಳಿಗೆ ಪುಸ್ತಕ, ಲೇಖನ ಸಾಮಗ್ರಿ ಹಾಗೂ ಭೂಪಟ, ನಕಾಶ, ಕನ್ನಡ ಪುಸ್ತಕಗಳನ್ನು ಉಚಿತವಾಗಿ ವಿತರಿಸಲಾಯಿತು.

ಈ ಸಂದರ್ಭ ಮಾತನಾಡಿದ ಶ್ರೀಧರಗಡ್ಡೆ ಸಿದ್ದಬಸಪ್ಪ, ಕರ್ನಾಟಕ ದಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಇದೆ ಎಂಬ ಕಾರಣದಿಂದ ಸರ್ಕಾರ ಕನ್ನಡ ಶಾಲೆಗಳನ್ನು ಮುಚ್ಚಲು ಮುಂದಾಗು ತ್ತಿದೆ. ಆದರೆ, ಗಡಿ ಭಾಗದಲ್ಲಿರುವ ಆಂಧ್ರದ ಕನ್ನಡ ಶಾಲೆಗಳಲ್ಲಿ ವಿದ್ಯಾರ್ಥಿ ಗಳು ಅಧಿಕ ಸಂಖ್ಯೆಯಲ್ಲಿದ್ದರೂ ಬೋಧಕರಿಲ್ಲ, ಅಗತ್ಯ ಪಠ್ಯ ಪುಸ್ತಕಗಳಿಲ್ಲ.
ಆದರೂ, ಕನ್ನಡದಲ್ಲಿ ಸಾಕಷ್ಟು ಸಂಖ್ಯೆಯ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವುದು ಸಂತಸದ ವಿಚಾರ ಎಂದು ಹೇಳಿದ್ದಾರೆ.

ಸ್ವಾತಂತ್ರ್ಯ ಪೂರ್ವದಲ್ಲಿ ಆಂಧ್ರ ಪ್ರದೇಶದ ಗಡಿಭಾಗದಲ್ಲಿ ಕನ್ನಡ ಶಾಲೆಗಳು ಸಾಕಷ್ಟು ಸಂಖ್ಯೆಯಲ್ಲಿದ್ದವು. ಆದರೆ, ಭಾಷಾವಾರು ಪ್ರಾಂತ್ಯಗಳನ್ನಾಗಿ ವಿಂಗಡಿಸಿದಾಗ ಕನ್ನಡಿಗರೇ ಹೆಚ್ಚಾಗಿ ವಾಸಮಾಡುತ್ತಿದ್ದ ಆಲೂರು, ಆದೋನಿ ಪ್ರದೇಶಗಳು ಆಂಧ್ರಕ್ಕೆ ಸೇರ್ಪಡೆ ಯಾಗಿವೆ. ಈಗಲೂ ಗಡಿಭಾಗದ ಆಂಧ್ರದ ಹಲವು ಗ್ರಾಮಗಳಲ್ಲಿ ಕನ್ನಡ ಮಾತನಾಡುವ ಸಾವಿರಾರು ಜನ ಇದ್ದು, ತಮ್ಮ ಮಕ್ಕಳನ್ನು ಮಾತೃಭಾಷೆಯಾದ ಕನ್ನಡದ ಶಾಲೆಗೆ ಸೇರಿಸುತ್ತಿರುವುದು ಅಭಿನಂದನೀಯ ಎಂದು ತಿಳಿಸಿದರು.

ಮುಖ್ಯಾಧ್ಯಾಪಕ ಹುಲುಗಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಶಿಕ್ಷಕ ಜಿ.ದೊಡ್ಡಬಸಪ್ಪ, ಸಿ.ಹೇಮರೆಡ್ಡಿ, ಸಿ.ಚರಣ್, ಜೆ.ಗಾದಿಲಿಂಗಪ್ಪ, ಕನ್ನಡ ಸಂಘದ ಸದಸ್ಯರು, ಗ್ರಾಮದ ಹಿರಿಯರು ಸೇರಿದಂತೆ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.