ಗುರುವಾರ , ಫೆಬ್ರವರಿ 25, 2021
29 °C

ಆಂಧ್ರ ಮುಖ್ಯಮಂತ್ರಿ ರಾಜೀನಾಮೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಆಂಧ್ರ ಮುಖ್ಯಮಂತ್ರಿ ರಾಜೀನಾಮೆ

ಹೈದರಾಬಾದ್ (ಪಿಟಿಐ) : ಆಂಧ್ರಪ್ರದೇಶ ವಿಭಜನೆ ವಿರೋಧಿಸಿ ಮುಖ್ಯಮಂತ್ರಿ ಎನ್. ಕಿರಣ್ ಕುಮಾರ್ ರೆಡ್ಡಿ ತಮ್ಮ ಸ್ಥಾನಕ್ಕೆ  ಬುಧವಾರ ರಾಜೀನಾಮೆಗೆ ನೀಡಿದ್ದಾರೆ. ಇದೇ ವೇಳೆ ಅವರು ಕಾಂಗ್ರೆಸ್ ಶಾಸಕ ಸ್ಥಾನಕ್ಕೂ ಕೂಡಾ ರಾಜೀನಾಮೆ ಸಲ್ಲಿಸಿದ್ದಾರೆ.

ಆಂಧ್ರ ಪ್ರದೇಶ ಪುನರ್‌ರಚನೆ ಮಸೂದೆಗೆ ಮಂಗಳವಾರ ಲೋಕಸಭೆ ಒಪ್ಪಿಗೆ ನೀಡಿದ್ದರಿಂದ ಬೇಸರಗೊಂಡು ಈ ನಿರ್ಧಾರ ತೆಗೆದುಕೊಂಡಿರುವುದಾಗಿ ತಿಳಿಸಿದ್ದಾರೆ.

ಸೀಮಾಂಧ್ರ ಪ್ರದೇಶದ ಶಾಸಕರು ಮತ್ತು ಸಂಪುಟ ಸಹದ್ಯೋಗಿಗಳನ್ನು ಭೇಟಿ ಮಾಡಿದ ಬಳಿಕ ಕಿರಣ್ ಕುಮಾರ್ ಅವರು ಸುದ್ದಿಗೋಷ್ಠಿ ನಡೆಸಿದರು.ರಾಜ್ಯದ ಜನತೆಗೆ ಕೇಂದ್ರ ಸರ್ಕಾರದಿಂದ ಅನ್ಯಾಯ ಆಗಿದೆ. ಸೀಮಾಂಧ್ರ ಸಂಸದರನ್ನು ಹೊರಗಿಟ್ಟು ರಾಜ್ಯ ವಿಭಜನೆ ನಿರ್ಧಾರ ತೆಗೆದುಕೊಳ್ಳಲಾಗಿದೆ. ಪ್ರತಿಪಕ್ಷಗಳ ಜತೆ ಸೇರಿ ಕಾಂಗ್ರೆಸ್ ಆಂಧ್ರ ಜನತೆ ಜತೆ ನಾಟಕವಾಡಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.ಸುದ್ದಿಗೋಷ್ಠಿಯಲ್ಲಿ ತಮ್ಮ ರಾಜೀನಾಮೆ ನಿರ್ಧಾರ ಪ್ರಕಟಿಸಿದ ಬಳಿಕ ಅವರು ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಈ ವೇಳೆ 8 ಮಂದಿ ಸಚಿವರು, 13 ಮಂದಿ ಶಾಸಕರು ಅವರೊಂದಿಗೆ ಇದ್ದರು. 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.