ಆಕಸ್ಮಿಕ ಬೆಂಕಿ, ಅಪಾರ ಹಾನಿ

7

ಆಕಸ್ಮಿಕ ಬೆಂಕಿ, ಅಪಾರ ಹಾನಿ

Published:
Updated:
ಆಕಸ್ಮಿಕ ಬೆಂಕಿ, ಅಪಾರ ಹಾನಿ

ಭಟ್ಕಳ: ಪಟ್ಟಣದ ಮುಖ್ಯರಸ್ತೆಯಲ್ಲಿರುವ ಕಾಶೀಂಜಿ ಕಾಪ್ಲೆಕ್ಸ್‌ನಲ್ಲಿನ ಮೊಬೈಲ್ ಅಂಗಡಿಯೊಂದಕ್ಕೆ ಶುಕ್ರವಾರ ಬೆಳಗಿನ ಜಾವ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಅಪಾರ ಹಾನಿ ಸಂಭವಿಸಿದ ಘಟನೆ ನಡೆದಿದೆ.ಆಕಸ್ಮಿಕ ಬೆಂಕಿಯಿಂದ ಹಾನಿಗೀಡಾದ ಅಂಗಡಿಯು ಫೈರೋಜ್ ಎಂಬವರಿಗೆ ಸೇರಿದ್ದಾಗಿದೆ. ಶುಕ್ರವಾರ ಬೆಳಗಿನ ಜಾವ ಆಕಸ್ಮಿಕ ಬೆಂಕಿ ತಗುಲಿದ್ದನ್ನು ಕಂಡ ಸುತ್ತಮುತ್ತಲಿನ ನಾಗರಿಕರು ತಕ್ಷಣ ಪೊಲೀಸರಿಗೆ ಮತ್ತು ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದರು.ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಠಾಣೆಯ ಸಿಬ್ಬಂದಿಗಳು ಉರಿಯುತ್ತಿದ್ದ ಬೆಂಕಿಯನ್ನು ನಂದಿಸಿ ಹೆಚ್ಚಿನ ಅನಾಹುತವನ್ನು ತಪ್ಪಿಸಿದರು.ಆಕಸ್ಮಿಕ ಬೆಂಕಿ ಅವಘಡದಿಂದ ಅಂಗಡಿಯಲ್ಲಿದ್ದ ಬೆಲೆಬಾಳುವ ಮೊಬೈಲ್ ಹ್ಯಾಂಡ್‌ಸೆಟ್‌ಗಳು,ಕರೆನ್ಸಿ,ಫರ್ನಿಚರ್ ಸೇರಿದಂತೆ ಹಲವು ವಸ್ತುಗಳು ಬೆಂಕಿಗಾಹುತಿಯಾಗಿದ್ದು,ಸುಮಾರು 50 ಸಾವಿರಕ್ಕೂ ಹೆಚ್ಚು ಹಾನಿ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.ಆಕಸ್ಮಿಕ ಬೆಂಕಿ ತಗುಲಿದ ಅಂಗಡಿಯ ಪಕ್ಕದಲ್ಲೇ ವಿದ್ಯುತ್ ಟ್ರಾನ್ಸ್‌ಫಾರ‌್ಮರ್ ಇದ್ದು, ಶಾರ್ಟ್ ಸರ್ಕಿಟ್‌ನಿಂದ ಬೆಂಕಿ ತಗುಲಿರಬಹುದು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ನಗರ ಪೊಲೀಸ್ ಠಾಣೆ ಎಸ್.ಐ.ಪ್ರಕಾಶ ದೇವಾಡಿಗ ಭೇಟಿ ನೀಡಿ ಪರಿಶೀಲಿಸಿದ್ದಾರೆ.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry