ಶನಿವಾರ, ಏಪ್ರಿಲ್ 17, 2021
31 °C

ಆಗಸ್ಟ್‌ನಲ್ಲಿ ಮೀನು ಮಾರುಕಟ್ಟೆ ಉದ್ಘಾಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪಡುಬಿದ್ರಿ: ಪಡುಬಿದ್ರಿಯಲ್ಲಿ ನಿರ್ಮಾಣವಾ ಗುತ್ತಿರುವ ಸುಸಜ್ಜಿತ ಮೀನು ಮಾರುಕಟ್ಟೆ ಕಾಮಗಾರಿಯನ್ನು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಕಟಪಾಡಿ ಶಂಕರ ಪೂಜಾರಿ ವೀಕ್ಷಿಸಿದರು.ಸುಸಜ್ಜಿತ ವ್ಯವಸ್ಥೆಯಲ್ಲಿ ಮೀನು ಮಾರಾಟಗಾರರಿಗೆ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ಕರಾವಳಿ ಅಭಿವೃದ್ಧಿ ಪ್ರಾಧಿಕಾರವು ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ 80ಲಕ್ಷ ರೂಪಾಯಿ ವೆಚ್ಚದಲ್ಲಿ ಈ ಮಾರುಕಟ್ಟೆಯ ಕಾಮಗಾರಿ ನಡೆಯುತ್ತಿದೆ. ಸ್ವಚ್ಛತೆ, ನಳ್ಳಿನೀರು, ಮರಾಟಗಾರರಿಗೆ ಸಮವಸ್ತ್ರ, ಗ್ಲೌಸ್, ಶೌಚಾಲಯದ ವ್ಯವಸ್ಥೆ ಒಳಗೊಂಡಿದೆ.ಕಾಮಗಾರಿ ಭರದಿಂದ ಸಾಗುತ್ತಿದ್ದು, ಆಗಸ್ಟ್ ವೇಳೆಗೆ ಉದ್ಘಾಟನೆಗೆ ಸಿದ್ಧವಾಗಲಿದೆ ಎಂದು ಶಂಕರ ಪೂಜಾರಿ ಹೇಳಿದರು.ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪ್ರಭಾಕರ ಶರ್ಮ, ಡಿಡಿಪಿಐ ನಾಗೇಂದ್ರ ಮಧ್ಯಸ್ಥ, ಪಡುಬಿದ್ರಿ ಗ್ರಾ ಪಂ. ಅಧ್ಯಕ್ಷೆ  ವಿಜಯಲಕ್ಷ್ಮಿ ಆಚಾರ್ಯ, ಉಪಾಧ್ಯಕ್ಷೆ ಸೇವಂತಿ ಸದಾಶಿವ್, ಪಿಡಿಒ ಮಮತಾ ಶೆಟ್ಟಿ ಮತ್ತಿತರರು  ಉಪಸ್ಥಿತರಿದ್ದರು.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.