ಬೆಂಗಳೂರು: ಮಂಗಳೂರಿನಲ್ಲಿ ಇದೇ 21ರಂದು ಆಯೋಜಿಸಲಾಗಿರುವ ತಿರಂಗ ಯಾತ್ರೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ಷಾ ಪಾಲ್ಗೊಳ್ಳಲಿದ್ದಾರೆ ಎಂದು ಪಕ್ಷದ ರಾಜ್ಯ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಮಾಧ್ಯಮದವರ ಜತೆ ಮಂಗಳವಾರ ಮಾತನಾಡಿದ ಅವರು, ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ಕುರಿತು ಪ್ರಮುಖರ ಸಮಿತಿ ಸಭೆಯಲ್ಲಿ ಚರ್ಚಿಸಲಾಯಿತು. ಅದೇ ದಿನ ರಾಜ್ಯದಾದ್ಯಂತ ಗಿಡ ನೆಡುವ ಕಾರ್ಯಕ್ರಮವನ್ನು ಬಿಜೆಪಿ ಆಯೋಜಿಸಿದೆ ಎಂದರು.

ಇದೇ 31ರಂದು ಹೊಸದಿಲ್ಲಿಯಲ್ಲಿ ನಡೆಯಲಿರುವ ಸಂಸದರ ಸಭೆ, ಸೆಪ್ಟೆಂಬರ್ 24 ಮತ್ತು 25ರಂದು ಕಲ್ಲಿಕೋಟೆಯಲ್ಲಿ ನಡೆಯಲಿರುವ ಪಕ್ಷದ ಸಮಾವೇಶಗಳಿಗೆ ರಾಜ್ಯದಿಂದ ಪ್ರತಿನಿಧಿಗಳು ಪಾಲ್ಗೊಳ್ಳುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು ಎಂದರು.

ಅಕ್ಟೋಬರ್ 3 ಮತ್ತು 4ರಂದು ಬೆಳಗಾವಿಯಲ್ಲಿ ರಾಜ್ಯ ಕಾರ್ಯಕಾರಿಣಿ, ಅಕ್ಟೋಬರ್ 21ರಿಂದ 23ರವರೆಗೆ ಪ್ರಶಿಕ್ಷಣ ಸಭೆಗಳ ಸಿದ್ಧತೆ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಗಿದೆ ಎಂದು ಹೇಳಿದರು.

ತಿರಂಗಯಾತ್ರೆಗೆ ರಾಜ್ಯದಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈವರೆಗೆ 206 ಸಭೆಗಳನ್ನು ನಡೆಸಲಾಗಿದೆ. ಇದೇ 23ರವರೆಗೆ ನಡೆಯಲಿರುವ ಯಾತ್ರೆಯ ಭಾಗವಾಗಿ ಒಂದು ಸಾವಿರ ಸಭೆಗಳನ್ನು ನಡೆಸುವ ಗುರಿ ಹಾಕಿಕೊಳ್ಳಲಾಗಿದೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.