ಆಗಸ್ಟ್ 25ರಿಂದ ಮೂರು ದಿನ ಜಿ.ವಿ. ಜನ್ಮ ಶತಮಾನೋತ್ಸವ

7

ಆಗಸ್ಟ್ 25ರಿಂದ ಮೂರು ದಿನ ಜಿ.ವಿ. ಜನ್ಮ ಶತಮಾನೋತ್ಸವ

Published:
Updated:

ಬೆಂಗಳೂರು: `ನಿಘಂಟು ತಜ್ಞ ಪ್ರೊ.ಜಿ.ವೆಂಕಟಸುಬ್ಬಯ್ಯ ಅವರಿಗೆ ಆಗಸ್ಟ್ 23 ರಂದು ನೂರು ವರ್ಷಗಳು ತುಂಬುವ ಹಿನ್ನೆಲೆಯಲ್ಲಿ ಆಗಸ್ಟ್ 25, 26 ಮತ್ತು 27 ರಂದು ನಗರದಲ್ಲಿ ಮೂರು ದಿನಗಳ ಕಾಲ ಜನ್ಮ ಶತಮಾನೋತ್ಸವ ಸಮಾರಂಭವನ್ನು ಜಯನಗರದಲ್ಲಿರುವ ಜಯರಾಮ ಸೇವಾ ಮಂಡಳಿಯ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ~ ಎಂದು ಪ್ರೊ.ಜಿ.ವಿ. ಜನ್ಮ ಶತಮಾನೋತ್ಸವ ಸ್ವಾಗತ ಸಮಿತಿಯ ಕಾರ್ಯದರ್ಶಿ ಎಂ.ಎ.ದಯಾಶಂಕರ ಶರ್ಮ ಹೇಳಿದರು.ನಗರದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ಜಿ.ವೆಂಕಟಸುಬ್ಬಯ್ಯ ಅವರ ಸಾಧನೆಗಳನ್ನು ಸ್ಮರಿಸುವ ಉದ್ದೇಶದಿಂದ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಜನ್ಮ ಶತಮಾನೋತ್ಸವದ ಅಂಗವಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಗುವುದು~ ಎಂದು ಅವರು ತಿಳಿಸಿದರು. `ಕಾರ್ಯಕ್ರಮದಲ್ಲಿ ರಾಜ್ಯಪಾಲರು, ಕೇಂದ್ರ ಮತ್ತು ರಾಜ್ಯ ಸಚಿವರು, ಜ್ಞಾನಪೀಠ ಪ್ರಶಸ್ತಿ ಪುರಸ್ಕ್ರತರೂ ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ~ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry