ಆಚಾರ್ಯ ಪದತ್ಯಾಗ

7

ಆಚಾರ್ಯ ಪದತ್ಯಾಗ

Published:
Updated:

ಬೆಂಗಳೂರು: ತಮಿಳುನಾಡಿನ ಮುಖ್ಯಮಂತ್ರಿ ಜಯಲಲಿತಾ ಅವರನ್ನು ಅಕ್ರಮ ಆಸ್ತಿ ಗಳಿಕೆ ಆರೋಪದಿಂದ `ರಕ್ಷಿಸಲು~ ಬಿಜೆಪಿ ಹೈಕಮಾಂಡ್ ಹೇರಿದ ಒತ್ತಡಕ್ಕೆ ಬೇಸತ್ತ ಅಡ್ವೊಕೇಟ್ ಜನರಲ್ (ಎಜಿ) ಬಿ.ವಿ.ಆಚಾರ್ಯ ಅವರು ತಮ್ಮ ಸ್ಥಾನಕ್ಕೆ ಬುಧವಾರ ರಾಜೀನಾಮೆ ನೀಡಿದ್ದಾರೆ.  ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜಯಲಲಿತಾ ಅವರ ವಿರುದ್ಧ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ (ಎಸ್‌ಪಿಪಿ) ಆಗಿಯೂ ಆಚಾರ್ಯ 2005ರಿಂದ ವಾದ ಮಂಡಿಸುತ್ತಿದ್ದಾರೆ. ಇವರೇ ಎಸ್‌ಪಿಪಿಯಾಗಿ ಮುಂದುವರಿದರೆ ಜಯಾ ಅವರನ್ನು ಈ ಪ್ರಕರಣದಿಂದ ರಕ್ಷಿಸುವುದು ಕಷ್ಟವಾಗುತ್ತದೆ ಎಂಬ ಹಿನ್ನೆಲೆಯಲ್ಲಿ ಆ ಸ್ಥಾನದಿಂದ ಹಿಂದಕ್ಕೆ ಸರಿಯುವಂತೆ ಆಚಾರ್ಯ ಅವರಿಗೆ ಮೇಲಿಂದ ಮೇಲೆ ಒತ್ತಡ ಬರುತ್ತಿತ್ತು. ಆದರೆ ಅದಕ್ಕೆ ಜಗ್ಗದೆ ಅವರು ಎಜಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry