ಬುಧವಾರ, ಏಪ್ರಿಲ್ 14, 2021
32 °C

ಆಜಂ ಖಾನ್ ವಿರುದ್ಧದ ಪ್ರಕರಣ ರದ್ಧತಿಗೆ ಉತ್ತರಪ್ರದೇಶದ ಅರ್ಜಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಂಪುರ (ಪಿಟಿಐ): ಹಿರಿಯ ಸಚಿವ ಮೊಹಮದ್ ಆಜಂ ಖಾನ್ ವಿರುದ್ಧದ ನಾಲ್ಕು ಪ್ರಕರಣಗಳನ್ನು ಹಿಂದಕ್ಕೆ ಪಡೆಯಲು ಉತ್ತರ ಪ್ರದೇಶ ಸರ್ಕಾರ ಮುಂದಾಗಿದ್ದು, ಈ ಕುರಿತು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದೆ.`2007ರಲ್ಲಿ ದುರುದ್ದೇಶಪೂರಿತವಾಗಿ ಖಾನ್ ವಿರುದ್ಧ ದೂರು ದಾಖಲಿಸಲಾಗಿದ್ದು ಪ್ರಕರಣವನ್ನು ಕೈಬಿಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡಿದ್ದೇವೆ~ ಎಂದು ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಆರ್. ಎಂ. ಶ್ರೀವಾಸ್ತವ ತಿಳಿಸಿದ್ದಾರೆ.2007ರಲ್ಲಿ ತಾಂಡಾದಲ್ಲಿ ನಡೆದ ಸಭೆಯ ವೇಳೆ ಅಂದಿನ ಮುಖ್ಯಮಂತಿ ಮಾಯಾವತಿ ವಿರುದ್ಧ ಖಂಡನಾರ್ಹ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಹಾಗೂ ಹೊಲಿಗೆ ಯಂತ್ರಗಳನ್ನು ವಿತರಿಸುವ ವೇಳೆ ನ್ಯಾಯಾಧೀಶರ ಮೇಲೆ ದಾಳಿ ನಡೆಸಿದ್ದ ಆರೋಪಕ್ಕಾಗಿ ಖಾನ್ ವಿರುದ್ಧ ಎರಡು  ಪ್ರಕರಣ ದಾಖಲಿಸಲಾಗಿತ್ತು.ಅಲ್ಲದೆ, ಸಾರ್ವಜನಿಕ ರಸ್ತೆಗೆ ತಡೆ ಉಂಟು ಮಾಡುವಂತೆ ಗೋಡೆ ನಿರ್ಮಿಸಿದ್ದುದು ಹಾಗೂ ಸ್ಥಳೀಯರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇರೆಗೆ ಮತ್ತೆರಡು ಪ್ರಕರಣಗಳನ್ನು ದಾಖಲಿಸಲಾಗಿತ್ತು.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.