ಸೋಮವಾರ, ಏಪ್ರಿಲ್ 19, 2021
23 °C

ಆಟಗಾರರಿಗೆ ನಿವೇಶನ: ಯಡಿಯೂರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಭಾರತಕ್ಕೆ ವಿಶ್ವಕಪ್ ದೊರಕಿರುವ ಹಿನ್ನೆಲೆಯಲ್ಲಿ ತಂಡದ ಪ್ರತಿ ಆಟಗಾರರಿಗೆ ಬೆಂಗಳೂರಿನಲ್ಲಿ ನಿವೇಶನ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಭಾರತಕ್ಕೆ ವಿಶ್ವಕಪ್ ತಂದುಕೊಟ್ಟ ಮಹೇಂದ್ರ ಸಿಂಗ್ ದೋನಿ ಪಡೆಗೆ ಅಭಿನಂದನೆ ಸಲ್ಲಿಸಿರುವ ಅವರು ಪ್ರತಿ ಆಟಗಾರರಿಗೂ ನಗರದಲ್ಲಿ 50/80 ಅಳತೆಯ ನಿವೇಶನ ನೀಡುವುದಾಗಿ ಪ್ರಕಟಿಸಿದ್ದಾರೆ. ‘ಮಹಿ’ ಬಳಗ ಫೈನಲ್‌ನಲ್ಲಿ ಶ್ರೀಲಂಕಾ ತಂಡವನ್ನು ಮಣಿಸಿ ಚಾಂಪಿಯನ್ ಆಗುತ್ತಿದ್ದಂತೆಯೇ ಸಿಎಂ ಅವರು ತಮ್ಮ ನಿರ್ಧಾರ ಪ್ರಕಟಿಸಿದರು.ಆಟಗಾರರಿಗೆ ಒಂದು ಕೋಟಿ

ಮುಂಬೈ: ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯು ವಿಶ್ವಕಪ್ ಗೆದ್ದ ತಂಡದ 15 ಆಟಗಾರರಿಗೆ ತಲಾ ಒಂದು ಕೋಟಿ ರೂಪಾಯಿ ನಗದು ಬಹುಮಾನ ಪ್ರಕಟಿಸಿದೆ. ಅದೇ ರೀತಿ ತಂಡದ ಸಹಾಯಕ ಸಿಬ್ಬಂದಿಗೆ ತಲಾ 50 ಲಕ್ಷ ರೂ ಮತ್ತು ಆಯ್ಕೆ ಸಮಿತಿ ಸದಸ್ಯರಿಗೆ ತಲಾ 25 ಲಕ್ಷ ರೂಪಾಯಿ ನೀಡುವುದಾಗಿ ಘೋಷಿಸಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.