ಶುಕ್ರವಾರ, ಮೇ 29, 2020
27 °C

ಆಟೋ ರಿಕ್ಷಾ ಚಾಲಕರಿಂದ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಆಟೋಗಳಿಗೆ ಗ್ಯಾಸ್‌ಕಿಟ್ ಅಳವಡಿಸುವುದನ್ನು ಕೈಬಿಡಬೇಕು ಎಂದು ಒತ್ತಾಯಿಸಿ ಮೈಸೂರು ಆಟೋ ರಿಕ್ಷಾ ಚಾಲಕರ ಸಂಘದ ಸದಸ್ಯರು ಆರ್‌ಟಿಓ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು.ಗ್ಯಾಸ್‌ಕಿಟ್ ಅಳವಡಿಕೆಗೆ ಸುಪ್ರೀಂ ಕೋರ್ಟ್ 2010ರ ಡಿ.30ರಂದು ತಡೆ ನೀಡಿದೆ. ಆದರೆ, ರಾಜ್ಯ ಸರ್ಕಾರ ಕಡ್ಡಾಯವಾಗಿ ಗ್ಯಾಸ್‌ಕಿಟ್ ಅಳವಡಿಸಿಕೊಳ್ಳುವಂತೆ ಸೂಚಿಸುವ ಮೂಲಕ ಸುಪ್ರೀಂ ಕೋರ್ಟ್‌ನ ಆದೇಶವನ್ನು ಉಲ್ಲಂಘನೆ ಮಾಡಲು ಹೊರಟಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.ಪೆಟ್ರೋಲ್ ಇಂಧನದ ಆಟೋ ರಿಕ್ಷಾಗಳಿಗೆ ಅರ್ಹತಾ ಪ್ರಮಾಣಪತ್ರ ನೀಡಲು ಪೂರ್ವ ವಲಯದ ಆರ್‌ಟಿಓ ಅಧಿಕಾರಿ ನಿರಾಕರಿಸುತ್ತಿದ್ದಾರೆ. ಆಟೋಗಳಿಗೆ ಕಡ್ಡಾಯವಾಗಿ ಗ್ಯಾಸ್‌ಕಿಟ್ ಅಳವಡಿಸುವವರೆಗೂ ಅರ್ಹತಾ ಪ್ರಮಾಣ ಪತ್ರ ನೀಡುವುದಿಲ್ಲ ಎಂದು ಹೇಳುತ್ತಿದ್ದಾರೆ. ಇದರಿಂದಾಗಿ ಬಡ ಆಟೋ ರಿಕ್ಷಾ  ಚಾಲಕರು ಪರದಾಡುವಂತಾಗಿದೆ. ಆದ್ದರಿಂದ, ಈ ಕೂಡಲೇ ಗ್ಯಾಸ್ ಅಳವಡಿಕೆ ಆದೇಶವನ್ನು ಹಿಂಪಡೆಯಬೇಕು. ಇಲ್ಲದಿದ್ದರೆ, ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.ಪ್ರತಿಭಟನೆಯಲ್ಲಿ ಸಂಘದ ಅಧ್ಯಕ್ಷ ಬಿ.ಟಿ.ರಾಜಣ್ಣ, ಗೌರವ ಅಧ್ಯಕ್ಷ ಹಿನಕಲ್ ಚನ್ನೇಗೌಡ ಹಾಗೂ ಪ್ರಧಾನ ಕಾರ್ಯದರ್ಶಿ ಎಂ.ಮಹೇವಸ್ವಾಮಿ ಸೇರಿದಂತೆ ಮತ್ತಿತರರು ಹಾಜರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.