ಭಾನುವಾರ, ಏಪ್ರಿಲ್ 11, 2021
25 °C

ಆಡಳಿತಾತ್ಮಕ ಸಮಸ್ಯೆಗೆ ಸ್ಥಳದಲ್ಲೇ ಸೂಕ್ತ ಕ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಆಡಳಿತಾತ್ಮಕ ಸಮಸ್ಯೆಗೆ ಸ್ಥಳದಲ್ಲೇ ಸೂಕ್ತ ಕ್ರಮ

ಗುಂಡ್ಲುಪೇಟೆ: ಗ್ರಾಮೀಣ ಪ್ರದೇಶದ ಜನರ ಆಡಳಿತಾತ್ಮಕ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಬಗೆಹರಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಹಶೀಲ್ದಾರ್ ಜಿ.ಎನ್. ಮಂಜು ನಾಥ್ ಶನಿವಾರ ಹೇಳಿದರು.ತಾಲ್ಲೂಕಿನ ಬೆಳಚಲವಾಡಿ ಗ್ರಾಮ ದಲ್ಲಿ ನಡೆದ ಜನಸ್ಪಂದನಾ ಕಾರ್ಯ ಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಈ ಸಭೆಯಲ್ಲಿ ರೈತರುಗಳ 85 ಅರ್ಜಿಗಳು ಬಂದಿವೆ, ಇದರಲ್ಲಿ 64 ತಾಲ್ಲೂಕು ಪಂಚಾಯಿತಿ ವ್ಯಾಪ್ತಿಗೆ, 9 ಅರ್ಜಿಗಳು ಕಂದಾಯ ಇಲಾಖೆಗೆ, 7 ಅರ್ಜಿಗಳು ಸಮಾಜ ಕಲ್ಯಾಣ ಇಲಾಖೆಗೆ, 1 ಅರ್ಜಿ ಸೆಸ್ಕ್‌ಗೆ ಸಂಬಂಧಿಸಿದ್ದು, ಶಿಕ್ಷಣ ಇಲಾಖೆ ವ್ಯಾಪ್ತಿಗೆ ಒಂದು ಅರ್ಜಿ ಬಂದಿದ್ದು. ಇವುಗಳನ್ನು ಪರಿಶೀಲಿಸಿ ಅತಿ ಶೀಘ್ರ ದಲ್ಲಿ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದರು.

 

ಪ್ರಸ್ತುತ ಸನ್ನಿವೇಶದಲ್ಲಿ ತಾಲ್ಲೂಕಿ ನಲ್ಲಿ ಮಳೆಯಾಗುತ್ತಿರುವುದರಿಂದ ಕೃಷಿ ಇಲಾಖೆ ಅಧಿಕಾರಿಗಳು ಬಿತ್ತನೆ ಬೀಜಗಳನ್ನು ಸಮರ್ಪಕವಾಗಿ ದಾಸ್ತಾನು ಮಾಡಿ ಕೊಂಡು ವಿತರಣೆ ಮಾಡ ಬೇಕೆಂದು ಗ್ರಾಮಸ್ಥರು ಕೃಷಿ ಇಲಾಖೆ ಅಧಿಕಾರಿಗಳನ್ನು ಒತ್ತಾಯಿಸಿದರು. ಸುವರ್ಣ ಭೂಮಿ ಯೋಜನೆ ಯಡಿ ಅತಿ ಸಣ್ಣ ರೈತರ ಪಟ್ಟಿಯನ್ನು ಈಗಾಗಲೇ ಜಿಲ್ಲಾಧಿಕಾರಿಗಳಿಗೆ ನೀಡ ಲಾಗಿದ್ದು, ಸರ್ಕಾರದ ಸೌಲಭ್ಯಗಳನ್ನು ಕೊಡಿಸಲು ಕ್ರಮ ಕೈಗೊಳ್ಳಲಾಗು ವುದು ಎಂದು ತಹಶೀಲ್ದಾರ್ ತಿಳಿಸಿ  ದರು. ಪಿಂಚಣಿ ಸೌಲಭ್ಯದ ಅರ್ಜಿ ಗಳನ್ನು ಕೂಡ ಶೀಘ್ರ ವಿಲೇವಾರಿ ಮಾಡಲಾಗುವುದು ಎಂದು ತಿಳಿಸಿದರು.

 

ಬೇಗೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೇಖಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಚಂದ್ರಪ್ಪ, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಕೆ.ಟಿ. ರಾಜಣ್ಣ, ತಾಲ್ಲೂಕು ಪಂಚಾಯಿತಿ ಯೋಜನಾಧಿಕಾರಿ ಮಹಾದೇವು, ಓಂಕಾರ ವಲಯ ಅರಣ್ಯಾಧಿಕಾರಿ ಸಂತೋಷ್‌ಕುಮಾರ್, ಸೆಸ್ಕ್‌ನ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ರಾಮಸ್ವಾಮಿ, ಕ್ಷೇತ್ರ ಶಿಕ್ಷಣಾಧಿಕಾರಿ ಮಲ್ಲಿಕಾರ್ಜುನ್ ಮುಂತಾದವರು ಭಾಗವಹಿಸಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.