ರಾಮನಗರ: `ದಶಕದ ಹಿಂದೆ ರಾಷ್ಟ್ರದಲ್ಲಿಯೇ ಕರ್ನಾಟಕದ ಆಡಳಿತ ವ್ಯವಸ್ಥೆ ಮುಂಚೂಣಿಯಲ್ಲಿತ್ತು. ಆದರೆ ಈಗ ಅದು ಗಣನೀಯ ಪ್ರಮಾಣದಲ್ಲಿ ಕುಸಿತ ಕಂಡಿದೆ. ಇದಕ್ಕೆ ಕಾರಣ ಏನು? ಎಲ್ಲಿ ಲೋಪವಾಗಿದೆ ಎಂಬುದನ್ನು ಸರ್ಕಾರಿ ನೌಕರರಾದ ನಾವೇ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ~ ಎಂದು ರಾಜ್ಯ ಗ್ರಾಮೀಣಾಭಿವೃದ್ಧಿ ಸಂಸ್ಥೆ ನಿರ್ದೇಶಕ ಅಶ್ರಫುಲ್ ಹಸನ್ ತಿಳಿಸಿದರು.

ಮೈಸೂರಿನ ಆಡಳಿತ ತರಬೇತಿ ಸಂಸ್ಥೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಸಹಯೋಗದೊಂದಿಗೆ ಜಿಲ್ಲಾ ಪಂಚಾಯಿತಿ ಭವನದಲ್ಲಿ ಶುಕ್ರವಾರ ಏರ್ಪಡಿಸಿದ್ದ `ಕರ್ನಾಟಕ ನಾಗರಿಕ ಸೇವೆಗಳ ಖಾತ್ರಿ ಕಾಯ್ದೆ-2011~ ಕುರಿತು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

`ಸರ್ಕಾರಿ ಕೆಲಸವನ್ನು ದೇವರ ಕೆಲಸ ಎಂದು ಹೇಳಲಾಗುತ್ತದೆ. ಆದರೆ ಸರ್ಕಾರಿ ನೌಕರರಾದ ನಾವು ಎಷ್ಟರ ಮಟ್ಟಿಗೆ ಕೆಲಸ ಮಾಡುತ್ತಿದ್ದೇವೆ. ನಾಗರಿಕರಿಗೆ ಎಂತಹ ಸೇವೆಯನ್ನು ನೀಡುತ್ತಿದ್ದೇವೆ ಎಂಬುದನ್ನು ಆತ್ಮ ವಿಮರ್ಶೆ ಮಾಡಿಕೊಳ್ಳಬೇಕು~ ಎಂದರು. `ಸರಿಯಾಗಿ ಕೆಲಸ ಮಾಡದ ಕಾರಣ ನಮ್ಮ ಮೇಲೆ ನಿಗಾ ಇಡಲು ಅಧಿನಿಯಮವೊಂದು ಜಾರಿಗೆ ಬಂದಿರುವುದು ದುರಂತವೇ ಸರಿ. ಈ ಮೂಲಕ ದಂಡ ಹಾಕಿಸಿಕೊಳ್ಳಬೇಕಾಗಿ ಬಂದಿರುವುದು ಶೋಚನೀಯ~ ಎಂದು ಅವರು ಬೇಸರ ವ್ಯಕ್ತಪಡಿಸಿದರು.

`ಉತ್ತರದಾಯಿತ್ವ, ಹೊಣೆಗಾರಿಕೆ, ಪಾರದರ್ಶಕತೆ ಈ ಮೂರು ಗುಣಗಳು ಸರ್ಕಾರಿ ಸಿಬ್ಬಂದಿಯಲ್ಲಿ ಇರಬೇಕು~ ಎಂದರು. `ಪ್ರಸ್ತುತ 11 ಇಲಾಖೆ 151 ಸೇವೆಗಳನ್ನು ಈ ನೂತನ ಕಾಯ್ದೆಯಡಿ ತರಲಾಗಿದೆ. ಕಾಲಮಿತಿಯೊಳಗೆ ಗುಣಮಟ್ಟದ ಸೇವೆಯನ್ನು ಒದಗಿಸುವುದೇ ಈ ಕಾಯ್ದೆಯ ಉದ್ದೇಶವಾಗಿದೆ.

ಈ ಕಾಯ್ದೆ ನಿರ್ಲಕ್ಷ್ಯ ತೋರುವ ಅಧಿಕಾರಿಗಳನ್ನು ದಂಡಿಸುವ ಮತ್ತು ಶಿಕ್ಷಿಸುವ ಶಕ್ತಿಯನ್ನು ಹೊಂದಿದೆ. ಈಗಾಗಲೇ ದೇಶದ ಕೆಲವು ರಾಜ್ಯಗಳು ಈ ಕಾಯ್ದೆಯನ್ನು ಅಳವಡಿಸಿಕೊಂಡಿವೆ. ಈ ಸಾಲಿನಲ್ಲಿ ಕರ್ನಾಟಕ 10ನೇ ರಾಜ್ಯವಾಗಿದೆ ಎಂದು ಮಾಹಿತಿ ನೀಡಿದರು.

ಜಿ.ಪಂ. ಸಿಇಒ ಕೆ.ಎಸ್.ವೆಂಕಟೇಶಪ್ಪ, ಉಪ ಕಾರ್ಯದರ್ಶಿ ಸಿದ್ದರಾಮಯ್ಯ, ತಹಶೀಲ್ದಾರ್ಗಳು, ಉಪ ವಿಭಾಗಾಧಿಕಾರಿ, ಜಿಲ್ಲೆಯ ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಕಾರ್ಯಾಗಾರದಲ್ಲಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.