ಶನಿವಾರ, ಜೂಲೈ 11, 2020
27 °C

ಆತೂರು: ಅಂತರರಾಜ್ಯ ವಾಲಿಬಾಲ್ ಪಂದ್ಯಾಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಆತೂರು: ಅಂತರರಾಜ್ಯ ವಾಲಿಬಾಲ್ ಪಂದ್ಯಾಟ

ಪುತ್ತೂರು: ತುಳುನಾಡಿನ ಜಾನಪದ ಕ್ರೀಡೆಯಾದ ಕಂಬಳವು ನಶಿಸುವ ಹಂತದಲ್ಲಿದ್ದು, ಇದಕ್ಕೆ ಪ್ರೋತ್ಸಾಹ ಅಗತ್ಯ. ಯುವ ಜನತೆ ಹೆಚ್ಚಿನ ಆಸಕ್ತಿ ವಹಿಸುವ ಮೂಲಕ ಈ ಜಾನಪದ ಕ್ರೀಡೆಯನ್ನು ಉಳಿಸುವ ಕೆಲಸ ಮಾಡಬೇಕಿದೆ ಎಂದು ಪುತ್ತೂರಿನ ಮಹಾಲಿಂಗೇಶ್ವರ ದೇವಾಲಯದ ಮಾಜಿ ಆಡಳಿತ ಮೊಕ್ತೇಸರ ಎನ್.ಕೆ.ಜಗನ್ನಿವಾಸ ರಾವ್ ಹೇಳಿದರು.ಪುತ್ತೂರಿನ ಮಹಾಲಿಂಗೇಶ್ವರ ದೇವಾಲಯದ ಎದುರಿನ ದೇವರಮಾರು ಗದ್ದೆಯಲ್ಲಿ ಭಾನುವಾರ ಆರಂಭಗೊಂಡ ಕೋಟಿ -ಚೆನ್ನಯ ಜೋಡುಕರೆ ಕಂಬಳವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಹಾಲಿಂಗೇಶ್ವರ ದೇವಾಲಯದ ಆಡಳಿತಾಧಿಕಾರಿ ವೈ.ಶಿವರಾಮಯ್ಯ ಅಧ್ಯಕ್ಷತೆ ವಹಿಸಿದ್ದರು. ಕೆಯ್ಯೂರು ದುರ್ಗಾಪರಮೇಶ್ವರಿ ದೇವಾಲಯದ ಆಡಳಿತ ಮೊಕ್ತೇಸರ ಚೆನ್ನಪ್ಪ ರೈ ದೇರ್ಲ, ಪುತ್ತೂರಿನ ಮಂಜಲ್ಪಡ್ಪು ಸುದಾನ ದೇವಾಲಯದ ಧರ್ಮಗುರು ವಿಜಯ ಹಾರ್ವಿನ್, ಉಪ್ಪಿನಂಗಡಿ ಸಹಸ್ತ್ರಲಿಂಗೇಶ್ವರ ದೇವಾಲಯದ ಮಾಜಿ ಆಡಳಿತ ಮೊಕ್ತೇಸರ ಸುಂದರೇಶ್ ಅತ್ತಾಜೆ, ಉಪ್ಪಿನಂಗಡಿ ಜುಮ್ಮಾ ಮಸೀದಿ ಅಧ್ಯಕ್ಷ ಕೆಂಪಿ ಮುಸ್ತಾಫ, ಪುತ್ತೂರಿನ ಕಲ್ಲೇಗದ ಕಲ್ಕುಡ ದೈವಸ್ಥಾನದ ಆಡಳಿತ ಮೊಕ್ತೇಸರ ಅಜಿತ್ ಕುಮಾರ್ ಜೈನ್, ಕಂಬಳ ಸಮಿತಿಯ ಅಧ್ಯಕ್ಷ ಎನ್.ಚಂದ್ರಹಾಸ ರೈ, ಕಾರ್ಯದರ್ಶಿ ಸತೀಶ್ ನಾಯ್ಕಾ, ಖಜಾಂಜಿ ಪ್ರಸನ್ನ ಶೆಟ್ಟಿ, ಸದಸ್ಯ ಮಠಂತಬೆಟ್ಟು ನಿರಂಜನ ರೈ, ಮಾಜಿ ಅಧ್ಯಕ್ಷ ಪ್ರವೀಣ್ ನಾಯ್ಕಿ, ರತನ್ ಕುಮಾರ್ ಕರ್ನೂರು  ಮತ್ತಿತರರು ಈ ಸಂದರ್ಭದಲ್ಲಿ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.