ಮಂಗಳವಾರ, ಏಪ್ರಿಲ್ 20, 2021
25 °C

ಆತ್ಮಸ್ಥೈರ್ಯದಿಂದ ಜೀವನ ನಡೆಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚನ್ನಪಟ್ಟಣ:   ಹರೆಯಕ್ಕೆ ಕಾಲಿಟ್ಟ ಹೆಣ್ಣು ಮಕ್ಕಳಲ್ಲಿ ಪ್ರಕೃತಿದತ್ತ ದೈಹಿಕ ಬದಲಾವಣೆ ಸಹಜ. ಆದ್ದರಿಂದ ಹೆಣ್ಣುಮಕ್ಕಳು ಯಾವುದೇ ಒತ್ತಡಕ್ಕೆ ಸಿಲುಕದೆ ಸಹಜವಾಗಿ ಜೀವನ ನಡೆಸುವ ಆತ್ಮಸ್ಥೈರ್ಯ ಬೆಳೆಸಿಕೊಳ್ಳಬೇಕು ಎಂದು ಸಾರ್ವಜನಿಕ ಆಸ್ಪತ್ರೆ ವೈದ್ಯೆ ರಾಜಲಕ್ಷ್ಮಿ ತಿಳಿಸಿದರು.ಮಂಗಳವಾರ ಪೇಟೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಎನ್‌ಪಿಇ ಜಿಇಎಲ್ ಪ್ರಾಯೋಜಿತ ಹೆಣ್ಣು ಮಕ್ಕಳ ಜಾಗೃತಿ ಹಾಗೂ ಮೀನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಹರೆಯದ ಹೆಣ್ಣುಮಕ್ಕಳಲ್ಲಿ ಒತ್ತಡಗಳು ಸಹಜವಾಗಿರುತ್ತದೆ. ಆದರೆ ಹೆಣ್ಣು ಮಕ್ಕಳು ಭವಿಷ್ಯದ ಬಗ್ಗೆ ಯೋಚಿಸಿ 18ನೇ ವಯಸ್ಸು ದಾಟುವವರೆಗೂ ವಿವಾಹವಾಗಬಾರದು, ರಕ್ತ ಸಂಬಧದ ಮದುವೆಗಳನ್ನು ನಿರಾಕರಿಸಬೇಕು ಎಂದರು.ವಕೀಲೆ ಸುಜಾತ ಅವರು, ಮಕ್ಕಳು ಮತ್ತು ಹಿರಿಯ ನಾಗರಿಕರ ಹಕ್ಕುಗಳು, ವೈವಾಹಿಕ ಕಾನೂನು, ಹೆಣ್ಣು ಮಕ್ಕಳ ಆಸ್ತಿ ಹಕ್ಕು, ಜನನ ಹಾಗೂ ಮರಣ ಪ್ರಮಾಣ ಪತ್ರಗಳ ಪ್ರಾಮುಖ್ಯತೆ ಕುರಿತು ವಿವರಿಸಿದರು.ಎಸ್‌ಡಿಎಂಸಿ ಉಪಾಧ್ಯಕ್ಷೆ ಭಾಗ್ಯ ಅಧ್ಯಕ್ಷತೆ ವಹಿಸಿದ್ದರು. ಸದಸ್ಯರಾದ ಭಾರತಿ, ಜಯಲಕ್ಷ್ಮಮ್ಮ, ಸಂಪನ್ಮೂಲ ವ್ಯಕ್ತಿ ಕೆಂಬೇಗೌಡ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕ ವಸಂತ್‌ಕುಮಾರ್ ಸ್ವಾಗತಿಸಿದರು. ಶಿಕ್ಷಕಿ ಜಿ. ಶಾರದ ವಂದಿಸಿದರು. ಶಿಕ್ಷಕಿ ರೇಣುಕ ನಿರೂಪಿಸಿದರು. ಮೀನಾ ತಂಡದ ಮಕ್ಕಳು ಪೋಷಕರಲ್ಲಿ ಜಾಗೃತಿ ಮೂಡಿಸುವ ನಾಟಕ ಪ್ರದರ್ಶಿಸಿದರು. ಸಾಂಸ್ಕೃತಿಕ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.