ಸೋಮವಾರ, ಜೂನ್ 14, 2021
26 °C

ಆತ್ಮಹತ್ಯಾ ಬಾಂಬ್‌ ದಾಳಿಗೆ 15 ಬಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಾಬೂಲ್‌(ಐಎಎನ್‌ಎಸ್‌): ಮೈಮನಾ ನಗರದ ಜನತೆ ನವ­ರೋಜ್‌(ಅಫಘಾನಿಗಳ ಹೊಸ ವರ್ಷ) ಸಂಭ್ರಮದ ಸಿದ್ಧತೆಯಲ್ಲಿದ್ದಾಗ ಉಗ್ರರು ಆತ್ಮಹತ್ಯಾ ಬಾಂಬ್‌ ದಾಳಿ ನಡೆಸಿ, 15 ಜನರನ್ನು ಬಲಿ ತೆಗೆದುಕೊಂಡಿದ್ದಾರೆ.‘ದಾಳಿಯಲ್ಲಿ 20 ಜನರೂ ಗಾಯಗೊಂಡಿದ್ದಾರೆ’ ಎಂದು ಪ್ರಾಂತ್ಯದ ರಾಜ್ಯಪಾಲ ಮೊಹಮ್ಮದ್‌ ಅಲ್ಲಾಹ ಬಕ್ತಾಶ್‌ ಘಟನೆ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸ್ಫೋಟದ ತೀವ್ರತೆಯಿಂದ ಸ್ಥಳದಲ್ಲಿದ್ದ ಅಂಗಡಿಗಳು, ವಾಹನಗಳು ಹಾನಿಗೀಡಾಗಿವೆ. ಯಾವುದೇ ಭಯೋತ್ಪಾದಕ ಸಂಘಟನೆ ದಾಳಿಯ ಹೊಣೆಯನ್ನು ಹೊತ್ತುಕೊಂಡಿಲ್ಲ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.