ಸೋಮವಾರ, ಮೇ 17, 2021
25 °C

ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿದ್ದ ಪರಶಿವಮೂರ್ತಿ (32) ಎಂಬುವರು ವಿಜಯನಗರ ಸಮೀಪದ ಪಂಚಶೀಲನಗರದಲ್ಲಿ ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಅವರು ಪತ್ನಿ ವಿಜಯಲಕ್ಷ್ಮಿ ಮತ್ತು ಇಬ್ಬರು ಹೆಣ್ಣು ಮಕ್ಕಳೊಂದಿಗೆ ಪಂಚಶೀಲನಗರದ ಆರನೇ ಅಡ್ಡರಸ್ತೆಯಲ್ಲಿ ವಾಸವಾಗಿದ್ದರು. ವಿಜಯಲಕ್ಷ್ಮಿ ಅವರು ಮಕ್ಕಳೊಂದಿಗೆ ಬೆಳಿಗ್ಗೆ ನೆಲಮಂಗಲ ಸಮೀಪದ ದೇವಸ್ಥಾನಕ್ಕೆ ಹೋಗಿದ್ದರು.ಮನೆಯಲ್ಲಿ ಒಬ್ಬರೇ ಇದ್ದ ಪರಶಿವಮೂರ್ತಿ, ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವಿಜಯನಗರ ಪೊಲೀಸರು ತಿಳಿಸಿದ್ದಾರೆ. `ಮದ್ಯವ್ಯಸನಿಯಾಗಿದ್ದ ತಮ್ಮ ಸರಿಯಾಗಿ ಕೆಲಸಕ್ಕೆ ಹೋಗುತ್ತಿರಲಿಲ್ಲ. ಆತ ಏಕೆ ಆತ್ಮಹತ್ಯೆ ಮಾಡಿಕೊಂಡ ಎಂಬುದು ಗೊತ್ತಿಲ್ಲ ಎಂದು ಪರಶಿವಮೂರ್ತಿ ಅವರ ಅಣ್ಣ ಮಂಜುನಾಥ್ ವಿಚಾರಣೆ ವೇಳೆ ಹೇಳಿಕೆ ಕೊಟ್ಟಿದ್ದಾರೆ' ಎಂದು ಪೊಲೀಸರು ಹೇಳಿದ್ದಾರೆ. ಪ್ರಕರಣ ದಾಖಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.