ಶನಿವಾರ, ಜೂನ್ 19, 2021
27 °C

ಆತ್ಮಹತ್ಯೆಗೆ ಶರಣಾದ ನವವಿವಾಹಿತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನವವಿವಾಹಿತೆಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಜಯನಗರ ಸಮೀಪದ ಅಶ್ವತ್ಥನಗರದಲ್ಲಿ ಮಂಗಳವಾರ ನಡೆದಿದೆ.

ಅಶ್ವತ್ಥನಗರ ನಾಲ್ಕನೇ ಅಡ್ಡರಸ್ತೆ ನಿವಾಸಿ ಸುಶೀಲ್‌ಕುಮಾರ್ ಎಂಬುವರ ಪತ್ನಿ ಫಿಲೋಮಿನಾ (26) ಆತ್ಮಹತ್ಯೆ ಮಾಡಿಕೊಂಡವರು. ಮೈಸೂರಿನ ನರ್ಸಿಂಗ್ ಕಾಲೇಜು ಒಂದರಲ್ಲಿ ಸಹಪಾಠಿಗಳಾಗಿದ್ದ ಸುಶೀಲ್‌ಕುಮಾರ್ ಮತ್ತು ಫಿಲೋಮಿನಾ ಪರಸ್ಪರ ಪ್ರೀತಿಸಿ ಎರಡು ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದರು. ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ದಂಪತಿ ಕೆಲಸ ಹುಡುಕುತ್ತಿದ್ದರು ಎಂದು ಸಂಜಯನಗರ ಪೊಲೀಸರು ತಿಳಿಸಿದ್ದಾರೆ.

ಪತಿ ಹೊರಗೆ ಹೋಗಿದ್ದ ಸಂದರ್ಭದಲ್ಲಿ ಅವರು ಮನೆಯಲ್ಲೇ ನೇಣು ಹಾಕಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ.

ಘಟನೆ ಸಂಬಂಧ ಫಿಲೋಮಿನಾ ತಾಯಿ ಮೇರಿ ಅವರು ದೂರು ಕೊಟ್ಟಿದ್ದಾರೆ. ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಅಪಘಾತ: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹೊಸೂರು ರಸ್ತೆಯ ಕೋನಪ್ಪನ ಅಗ್ರಹಾರ ಬಸ್ ನಿಲ್ದಾಣದ ಬಳಿ ಗುರುವಾರ ಬೆಳಗಿನ ಜಾವ ನಡೆದಿದೆ.

ಮೃತ ವ್ಯಕ್ತಿಯ ವಯಸ್ಸು ಸುಮಾರು 32 ವರ್ಷ. ಅವರ ಗುರುತು ಪತ್ತೆಯಾಗಿಲ್ಲ. ಅವರಿಗೆ ಡಿಕ್ಕಿ ಹೊಡೆದ ವಾಹನದ ಬಗ್ಗೆ ಮಾಹಿತಿ ಸಿಕ್ಕಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಎಲೆಕ್ಟ್ರಾನಿಕ್‌ಸಿಟಿ ಸಂಚಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.