ಬುಧವಾರ, ನವೆಂಬರ್ 13, 2019
18 °C

ಆತ್ಮಾನಂದ ರಾಜೀನಾಮೆ

Published:
Updated:

ಮಂಡ್ಯ:  ಕಾಂಗ್ರೆಸ್ ಜಿಲ್ಲಾ ಘಟಕದಲ್ಲಿ ಭುಗಿಲೆದ್ದಿರುವ ಭಿನ್ನಮತ ತಾರಕಕ್ಕೇರಿದ್ದು, ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಎಂ.ಎಸ್.ಆತ್ಮಾನಂದ ರಾಜೀನಾಮೆ ನೀಡಿದ್ದಾರೆ.ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಲು ಆಕಾಂಕ್ಷಿಯಾಗಿದ್ದ ಅವರು, ಟಿಕೆಟ್ `ಕೈ' ತಪ್ಪಿದ್ದರಿಂದ ಬೇಸರಗೊಂಡಿದ್ದರು. ಈಗ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಭಿನ್ನಮತದ ಕಾವಿಗೆ ತುಪ್ಪ ಸುರಿದಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಾ. ಜಿ.ಪರಮೇಶ್ವರ್ ಅವರಿಗೆ ಏ. 17ರಂದೇ ರಾಜೀನಾಮೆ ಪತ್ರವನ್ನು ಕಳುಹಿಸಿರುವ ಅವರು, ಮಾಧ್ಯಮಗಳಿಗೆ ಶನಿವಾರ ರಾಜೀನಾಮೆ ಪತ್ರ ಬಿಡುಗಡೆ ಮಾಡಿದರು.ಪತ್ರ ಸಾರಾಂಶ ಹೀಗಿದೆ: `ನನ್ನನ್ನು ಜಿಲ್ಲಾಧ್ಯಕ್ಷನಾಗಿ ಈವರೆಗೆ ಕಾರ್ಯನಿರ್ವಹಿಸಲು ಅವಕಾಶ ಕಲ್ಪಿಸಿದ್ದಕ್ಕಾಗಿ ತಮಗೆ ಕೃತಜ್ಞತೆಗಳು. ರಾಜ್ಯ ವಿಧಾನಸಭೆಯ ಚುನಾವಣೆಗೆ ಸಂಬಂಧಪಟ್ಟಂತೆ, ಮಂಡ್ಯ ಜಿಲ್ಲೆಯಲ್ಲಿನ ಈಚೀನ ಬೆಳವಣಿಗೆಗಳು, ಪಕ್ಷದ ಅಧ್ಯಕ್ಷನಾದ ನನ್ನಲ್ಲಿ ಆತಂಕ ಮೂಡಿಸಿದೆ. ಸಾರ್ವಜನಿಕರ ಚರ್ಚೆಗೂ ಗ್ರಾಸವಾಗಿದೆ' `ಪಕ್ಷದಲ್ಲಿನ ಅಭ್ಯರ್ಥಿಗಳ ಆಯ್ಕೆಯಲ್ಲಿ ಉದ್ಭವಿಸಿರುವ ಈ ಗೊಂದಲಮಯ ಪರಿಸ್ಥಿತಿಯಲ್ಲಿ, ಸಾರ್ವಜನಿಕರಿಗೆ ಈ ಬಗೆಗೆ ಉತ್ತರಿಸುವುದು ಕಠಿಣ ಹಾಗೂ ದುಸ್ತರವಾಗಿದೆ. ಈ ಸಂದಿಗ್ಧತೆಯಿಂದಾಗಿ ಪಕ್ಷದ ಜಿಲ್ಲಾಧ್ಯಕ್ಷನಾಗಿ ಮುಂದುವರೆ ಯಲು, ಪಕ್ಷದ ಹಿತದೃಷ್ಟಿಯಿಂದ ಸಾಧುವಲ್ಲ ಹಾಗೂ ಸಮಂಜಸವೂ ಅಲ್ಲವೆಂದು ನನ್ನ ಭಾವನೆ. ಆದ್ದರಿಂದ ನೈತಿಕತೆಯ ಹಿನ್ನೆಲೆಯಲ್ಲಿ, ರಾಜೀನಾಮೆಯನ್ನು ನೀಡುತ್ತಿದ್ದೇನೆ. ದಯವಿಟ್ಟು ಸ್ವೀಕರಿಸಿ. ನನ್ನ ಅನನ್ಯ ವಂದನೆಗಳು' ಎಂದು ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.

ಪ್ರತಿಕ್ರಿಯಿಸಿ (+)