ಆತ್ಮಾಹುತಿ: ಕಾಲೇಜಿನ ಮುಖ್ಯಸ್ಥೆ ಬೆದರಿಕೆ

7

ಆತ್ಮಾಹುತಿ: ಕಾಲೇಜಿನ ಮುಖ್ಯಸ್ಥೆ ಬೆದರಿಕೆ

Published:
Updated:

ಕಾನ್ಪುರ (ಪಿಟಿಐ):  ತಾಯಿಯ ಸಾವಿಗೆ ಕಾರಣವಾಗಿರುವ ಆಸ್ಪತ್ರೆ ಸಿಬ್ಬಂದಿಗೆ ಶಿಕ್ಷೆ ನೀಡದಿದ್ದರೆ ತಾನೇ ಕುತ್ತಿಗೆ ಕೊಯ್ದುಕೊಂಡು ಆತ್ಮಾಹುತಿ ಮಾಡಿಕೊಳ್ಳುವುದಾಗಿ ಕಾಲೇಜು ಪ್ರಾಂಶುಪಾಲರೊಬ್ಬರು ಕೇಂದ್ರ ಸಚಿವರು ಭಾಗವಹಿಸಿದ್ದ ವಿಚಾರ ಸಂಕಿರಣದಲ್ಲಿ ಬೆದರಿಕೆ ಹಾಕಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.ಇಲ್ಲಿನ ಡಿಜಿ ಮಹಿಳಾ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿರುವ ಮೀಟಾ ಜಮಾಲ್ ಅವರು ಕೇಂದ್ರ ಸಚಿವ ಶ್ರೀಪ್ರಕಾಶ್ ಜೈಸ್ವಾಲ್ ಎದುರು ಈ ರೀತಿಯ ಬೆದರಿಕೆ ಒಡ್ಡಿದ್ದಾರೆ.  ಮೀಟಾ ಅವರ ತಾಯಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು.ಆದರೆ ಅವರು ಕೆಲವು ದಿನಗಳ ಹಿಂದೆ ಮೃತಪಟ್ಟಿದ್ದು, ತಾಯಿಯ ಸಾವಿಗೆ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯ ಕಾರಣ ಎಂದು ಆರೋಪಿಸಿ ಮೀಟಾ ಆಸ್ಪತ್ರೆ ಸಿಬ್ಬಂದಿ ವಿರುದ್ಧ ದೂರು ನೀಡಿದ್ದರು. ಆದರೆ ಆರೋಪಿಗಳ ವಿರುದ್ಧ ಪೊಲೀಸರು ಯಾವುದೇ ಕ್ರಮ ಕೈಗೊಳ್ಳದ ಕಾರಣ ಈ ರೀತಿ ಬೆದರಿಕೆ ಹಾಕಿದ್ದಾರೆ ಎಂದು ಮೂಲಗಳು ತಿಳಿಸಿವೆ.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry