ಭಾನುವಾರ, ಜೂನ್ 13, 2021
24 °C

ಆತ್ಮಾಹುತಿ ದಾಳಿ: ನ್ಯಾಯಾಧೀಶ ಸೇರಿ 11 ಜನ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಇಸ್ಲಾಮಾಬಾದ್‌(ಪಿಟಿಐ): ಇಲ್ಲಿನ ನ್ಯಾಯಾಲಯದಲ್ಲಿ ಸೋಮವಾರ ಬೆಳಗ್ಗೆ ಸಂಭವಿಸಿದ ಆತ್ಮಾಹತ್ಯೆ ಬಾಂಬ್‌ದಾಳಿಯಲ್ಲಿ ನ್ಯಾಯಾಧೀಶ ಸೇರಿದಂತೆ 11ಜನರು ಸಾವನ್ನಪ್ಪಿದ್ದಾರೆ ಎಂದು ಪಾಕಿಸ್ತಾನ ಪೊಲೀಸರು ತಿಳಿಸಿದ್ದಾರೆ.ಇಬ್ಬರು ಉಗ್ರರು ನ್ಯಾಯಾಲಯದೊಳಕ್ಕೆ ನುಗ್ಗಿ ಸಾರ್ವಜನಿಕರು ಮತ್ತು ವಕೀಲರ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿ, ನಂತರ ಆತ್ಮಾಹುತಿ ಬಾಂಬ್‌ಸ್ಫೋಟಿಸಿಕೊಂಡರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ ಎಂದು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಘಟನೆಯಲ್ಲಿ ನ್ಯಾಯಾಧೀಶ ರಫಖತ್ ಆಹಮ್ಮದ್ ಖಾನ್ ಸೇರಿದಂತೆ 11ಜನರು ಮೃತಪಟ್ಟಿದ್ದಾರೆ. 30ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದು ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆಗಳಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.