ಶನಿವಾರ, ಏಪ್ರಿಲ್ 17, 2021
23 °C

ಆದರ್ಶ ಹಗರಣದ ದೋಷಾರೋಪ ಪಟ್ಟಿ: ಆ.6ರಂದು ಕೋರ್ಟ್ ನಿರ್ಧಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ (ಪಿಟಿಐ): ಆದರ್ಶ ಹೌಸಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಸಲ್ಲಿಸಿರುವ ದೋಷಾರೋಪ ಪಟ್ಟಿ ಬಗ್ಗೆ ವಿಶೇಷ ನ್ಯಾಯಾಲಯ ಆಗಸ್ಟ್ 6ರಂದು ನಿರ್ಧರಿಸಲಿದೆ. ಇದರ ಜೊತೆಗೆ ಮಹಾರಾಷ್ಟ್ರದ ಮುಖ್ಯಮಂತ್ರಿ ಅಶೋಕ್ ಚವಾಣ್ ಸೇರಿ ಇತರ ಹದಿಮೂರು ಆರೋಪಿಗಳ ವಿರುದ್ಧದ ಮುಂದಿನ ವಿಚಾರಣೆ ಬಗ್ಗೆಯೂ ನಿರ್ಧಾರ ಕೈಗೊಳ್ಳಲಿದೆ.ಈ ಹಗರಣದಲ್ಲಿ ಸಿಬಿಐ ತನಿಖೆಯ ವ್ಯಾಪ್ತಿ ಬಗ್ಗೆ ಮಹಾರಾಷ್ಟ್ರ ಸರ್ಕಾರ ಸಲ್ಲಿಸಿರುವ ತಕರಾರು ಅರ್ಜಿ ಆಗಸ್ಟ್ 3ರಂದು ದೆಹಲಿ ಹೈಕೋರ್ಟ್‌ನಲ್ಲಿ ವಿಚಾರಣೆಗೆ ಬರಲಿದೆ ಎಂಬ ವಾದಿ ಮತ್ತು ಪ್ರತಿವಾದಿ ವಕೀಲರ ಹೇಳಿಕೆಯನ್ನು ಆಲಿಸಿದ ಬಳಿಕ ವಿಶೇಷ ನ್ಯಾಯಾಧೀಶ ಎಂ.ವಿ. ಕುಲಕರ್ಣಿ ಪ್ರಕರಣದ ಮುಂದಿನ ವಿಚಾರಣೆಯನ್ನು ಆಗಸ್ಟ್ 6ಕ್ಕೆ ಮುಂದೂಡಿದರು.ಆರೋಪಿಗಳ ವಿರುದ್ಧ ಸಿಬಿಐ ಸಲ್ಲಿಸಿದ ಒಂದು ಸಾವಿರ ಪುಟಗಳ ದೋಷಾರೋಪ ಪಟ್ಟಿ ಮತ್ತು ಮುಂದಿನ ವಿಚಾರಣೆ (ನೊಟೀಸ್ ನೀಡಿಕೆ) ಬಗ್ಗೆ ದಾಖಲೆ ಸ್ವೀಕರಿಸಿದ ಬಳಿಕ ಕೋರ್ಟ್ ವಿಚಾರಣೆಯ ಮುಂದಿನ ದಿನಾಂಕ ನಿಗದಿ ಮಾಡಿದೆ.ಆದಾಗ್ಯೂ ಆದರ್ಶ ಹಗರಣವನ್ನು ಸಿಬಿಐ ತನಿಖೆ ನಡೆಸುತ್ತಿರುವುದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಮುಂಬೈ ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿತ್ತು.ರಾಜ್ಯ ಸರ್ಕಾರ ಸಲ್ಲಿಸಿದ ಅರ್ಜಿ ಪ್ರಕಾರ, ಈ ನಿವೇಶನ ರಾಜ್ಯ ಸರ್ಕಾರಕ್ಕೆ ಸೇರಿದ್ದು ಮತ್ತು ಈ ಬಗ್ಗೆ ತನಿಖೆ ನಡೆಸುವಂತೆ ಸರ್ಕಾರವೂ ಕೋರಿಕೆ ಸಲ್ಲಿಸಿಲ್ಲ ಎಂದು ಪ್ರಮಾಣ ಪತ್ರ ಸಲ್ಲಿಸಿತ್ತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.