ಶುಕ್ರವಾರ, ಏಪ್ರಿಲ್ 23, 2021
30 °C

ಆದಿವಾಸಿಗಳಿಗೆ ನಿರ್ಬಂಧ ಇಲ್ಲ: ಸಚಿವ ಯೋಗೀಶ್ವರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: `ಅರಣ್ಯದಲ್ಲಿ ದೊರೆಯುವ ಉಪ ಉತ್ಪನ್ನಗಳನ್ನು ಸಂಗ್ರಹಿಸಿ ಮಾರಾಟ ಮಾಡುವ ಮೂಲಭೂತ ಹಕ್ಕನ್ನು ಆದಿವಾಸಿಗಳು ಪಡೆದಿದ್ದಾರೆ. ಈ ವಿಚಾರದಲ್ಲಿ ಅರಣ್ಯಾಧಿಕಾರಿಗಳು ಯಾವುದೇ ರೀತಿಯ ನಿರ್ಬಂಧ ಹೇರದಂತೆ ಸೂಚಿಸುತ್ತೇನೆ~ ಎಂದು ಅರಣ್ಯ ಸಚಿವ ಸಿ.ಪಿ.ಯೋಗೀಶ್ವರ್ ಭರವಸೆ ನೀಡಿದರು.ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ತು ನಗರದಲ್ಲಿ ಗುರುವಾರ ಆಯೋಜಿಸಿದ್ದ ವಿಶ್ವ ಆದಿವಾಸಿ ದಿನಾಚರಣೆಯಲ್ಲಿ ಅವರು ಮಾತನಾಡಿದರು.`ರಾಜ್ಯದಾದ್ಯಂತ ವಿವಿಧ ಹೆಸರಿನಲ್ಲಿ ಹರಿದು ಹಂಚಿ ಹೋಗಿರುವ ಆದಿವಾಸಿ ಜನಾಂಗದ ಅಭಿವೃದ್ಧಿಗೆ ವಿವಿಧ ಹೆಸರುಗಳೇ ತೊಡಕಾಗಿದೆ. ಸರ್ಕಾರ ಸಾಮಾಜಿಕ ಭದ್ರತೆ ನೀಡುವಲ್ಲಿ ಬದ್ಧವಾಗಿದೆ. ಪರಿಷತ್ತು ಈಗಾಗಲೇ ಹಲವು ಬೇಡಿಕೆಗಳನ್ನು ಸರ್ಕಾರದ ಮುಂದಿರಿಸಿದೆ. ಇದನ್ನು ಈಡೇರಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು~ ಎಂದು ತಿಳಿಸಿದರು.`ಹುಲಿ ಯೋಜನೆ ಜಾರಿಗೆ ಬಂದಿರುವ ಹಿನ್ನೆಲೆಯಲ್ಲಿ ಅರಣ್ಯದಲ್ಲಿರುವ ಆದಿವಾಸಿಗಳನ್ನು ಒಕ್ಕಲೆಬ್ಬಿಸುವ ಬಗ್ಗೆ ಯಾವುದೇ ಚಿಂತನೆ ನಡೆಸಿಲ್ಲ. ಆದಿವಾಸಿಯಲ್ಲಿರುವ ಕೆಲವೇ ಬಲಶಾಲಿ ಪಂಗಡಗಳು ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿದೆ~ ಎಂದು ತಿಳಿಸಿದರು.ಇದಕ್ಕೂ ಮುನ್ನ ಮಾತನಾಡಿದ ಪರಿಷತ್ ಅಧ್ಯಕ್ಷ ಬಸವರಾಜು, `ಏಕಗವಾಕ್ಷಿ ಮಾದರಿಯಲ್ಲಿ ರಾಜ್ಯದಲ್ಲಿರುವ ಆದಿವಾಸಿಗಳಿಗೆ ಸವಲತ್ತುಗಳು ದೊರೆಯಬೇಕು. ಈ ನಿಟ್ಟಿನಲ್ಲಿ ಸರ್ಕಾರ ಪ್ರತ್ಯೇಕವಾದ ಪರಿಶಿಷ್ಟ  ಪಂಗಡಗಳ ಆಯೋಗ ಮತ್ತು ಸಚಿವಾಲಯವನ್ನು  ರಚನೆ ಮಾಡಬೇಕು~ ಎಂದು ಒತ್ತಾಯಿಸಿದರು.`ಅರಣ್ಯ ಹಕ್ಕು ಕಾಯಿದೆಯಡಿ ಬಹುಸಂಖ್ಯಾತ ಬುಡಕಟ್ಟುಗಳು ವಾಸವಾಗಿರುವ ಪಶ್ಚಿಮಘಟ್ಟ ಪ್ರದೇಶವನ್ನು ಅನಸೂಚಿತ ಪ್ರದೇಶವೆಂದು ಘೋಷಿಸಬೇಕು. ಶೈಕ್ಷಣಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಪೂರಕವಾಗಿ ಆದಿವಾಸಿಗಳ ವಿಶ್ವವಿದ್ಯಾಲಯವೊಂದನ್ನು ಸ್ಥಾಪಿಸಬೇಕು~ ಎಂದು ಆಗ್ರಹಿಸಿದರು.ಇತರೆ  ಬೇಡಿಕೆಗಳು:  ಇತರೆ ಅಲೆಮಾರಿ ಬುಡಕಟ್ಟುಗಳಾದ ಅಡ್ವಿ, ಚಿಂಚೇರ್, ಕಾತಕರಿ ಮತ್ತುಅಭಿವೃದ್ಧಿಗಾಗಿ ವಿಶೇಷ ಯೋಜನೆ ಅನುಷ್ಠಾನಗೊಳಿಸದ ಆದಿವಾಸಿ ದಿನಾಚರಣೆಯನ್ನು ಅಧಿಕೃತವಾಗಿ ಆಚರಿಸಿ, ಸಾಧಕರನ್ನು ` ಆದಿವಾಸಿ ಸಿರಿ~ ಎಂಬ ಪ್ರಶಸ್ತಿ ನೀಡಿ ಗೌರವಿಸಬೇಕು. ಆದಿವಾಸಿ ಭವನ ನಿರ್ಮಾಣಕ್ಕೆ ಮುಂದಾಗಬೇಕು. ಉನ್ನತ ಶಿಕ್ಷಣಕ್ಕೆ ಆದ್ಯತೆ, ಆರೋಗ್ಯ ಶಿಬಿರಗಳನ್ನು ಹಮ್ಮಿಕೊಳ್ಳುವುದು ಸೇರಿದಂತೆ ಹಲವು ಬೇಡಿಕೆಗಳ ಮನವಿ ಪತ್ರವನ್ನು ಸಚಿವರಿಗೆ ಸಲ್ಲಿಸಲಾಯಿತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.