ಆದೇಶ ಪುನರ್‌ಪರಿಶೀಲಿಸಿ

7

ಆದೇಶ ಪುನರ್‌ಪರಿಶೀಲಿಸಿ

Published:
Updated:

ಬೆಂಗಳೂರು: `ತಮಿಳುನಾಡಿಗೆ ನೀರು ಬಿಡಬೇಕು ಎಂದು ಕಾವೇರಿ ನದಿ ಪ್ರಾಧಿಕಾರ (ಸಿಆರ್‌ಎ) ನೀಡಿರುವ ಆದೇಶ ಪುನರ್ ಪರಿಶೀಲಿಸುವ ಪೂರ್ಣ ಅಧಿಕಾರ, ಪ್ರಾಧಿಕಾರದ ಅಧ್ಯಕ್ಷರೂ ಆದ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರಿಗೆ ಇದೆ. ಅವರು ತಮ್ಮ ಆದೇಶವನ್ನು ಕೂಡಲೇ ಪುನರ್ ಪರಿಶೀಲಿಸಬೇಕು~ ಎಂದು ಜಲಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ ಬುಧವಾರ ಇಲ್ಲಿ ಆಗ್ರಹಪಡಿಸಿದರು.ಕೇಂದ್ರ ಜಲಸಂಪನ್ಮೂಲ ಇಲಾಖೆಯ ಕಾರ್ಯದರ್ಶಿ ಅಧ್ಯಕ್ಷರಾಗಿರುವ ಕಾವೇರಿ ಉಸ್ತುವಾರಿ ಸಮಿತಿ (ಸಿಎಂಸಿ) ಗುರುವಾರ ದೆಹಲಿಯಲ್ಲಿ ಸಭೆ ಸೇರಲಿರುವ ಹಿನ್ನೆಲೆಯಲ್ಲಿ ಬೊಮ್ಮಾಯಿ ಅವರು ಹಿರಿಯ ಅಧಿಕಾರಿಗಳ ಜೊತೆ ಬೆಂಗಳೂರಿನಲ್ಲಿ ಸಭೆ ನಡೆಸಿದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry