ಸೋಮವಾರ, ಮೇ 25, 2020
27 °C

ಆದ್ಯತೆಗೆ ಮೊಯಿಲಿ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ವ್ಯಾಪ್ತಿಯ ಅಪೂರ್ಣ ಯೋಜನೆಗಳನ್ನು ಪ್ರಸಕ್ತ ರೈಲ್ವೆ ಬಜೆಟ್‌ನಲ್ಲಿ ಪೂರ್ಣಗೊಳಿಸು ವಂತೆ ಕೇಂದ್ರ ರೈಲ್ವೆ ಸಚಿವೆ ಮಮತಾ ಬ್ಯಾನರ್ಜಿ ಅವರಿಗೆ ಕೇಂದ್ರ ಕಾನೂನು ಸಚಿವ ಎಂ.ವೀರಪ್ಪಮೊಯಿಲಿ ಮನವಿ ಮಾಡಿದ್ದಾರೆ.ಚಿಕ್ಕಬಳ್ಳಾಪುರ- ಗೌರಿಬಿದನೂರು, ಚಿಕ್ಕಬಳ್ಳಾಪುರ- ಬಾಗೆಪಲ್ಲಿ ಮತ್ತು ಪುಟ್ಟಪರ್ತಿ ನಡುವೆ ಹೊಸ ರೈಲ್ವೆ ಮಾರ್ಗ ಅಳವಡಿಸುವ ನಿಟ್ಟಿನಲ್ಲಿ ಕಳೆದ ಬಜೆಟ್‌ನಲ್ಲಿ ಸರ್ವೆ ಕಾರ್ಯ ಕೈಗೊಳ್ಳಲಾಗಿತ್ತು. ಈಗ ಸರ್ವೆ ಕಾರ್ಯ ಮುಗಿದಿದ್ದು, ಹೊಸ ಬಜೆಟ್‌ನಲ್ಲಿ ಈ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಆದ್ಯತೆ ನೀಡಬೇಕು ಎಂದು ಅವರು ಅವರು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.ಚಿಕ್ಕಬಳ್ಳಾಪುರ ಮತ್ತು ಕೋಲಾರ ನಡುವೆ ಗೇಜ್ ಪರಿರ್ತನೆ ಕಾರ್ಯ ನಿಂತು ಹೋಗಿದ್ದು, ಈ ಕಾಮಗಾರಿ ಆರಂಭಕ್ಕೆ ಚಾಲನೆ ನೀಡಬೇಕು. ಚಿಕ್ಕಬಳ್ಳಾಪುರ, ಗೌರಿಬಿದನೂರು, ಯಲಹಂಕ, ದೊಡ್ಡಬಳ್ಳಾಪುರ, ದೇವನಹಳ್ಳಿ ಈ 5 ಸ್ಥಳಗಳಲ್ಲಿ ಈಗಿರುವ ರೈಲ್ವೆ  ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸಬೇಕು. ಮಾದರಿ ರೈಲ್ವೆ  ನಿಲ್ದಾಣ ಮಾಡುವ ಬಗ್ಗೆ ಕಳೆದ ಬಜೆಟ್‌ನಲ್ಲಿ ಆದ್ಯತೆ ನೀಡಲಾಗಿತ್ತು. ಆದರೆ ಈ ಕಾಮಗಾರಿಗಳನ್ನು ತಡೆ ಹಿಡಿಯಲಾಗಿದ್ದು, ನೂತನ ಬಜೆಟ್‌ನಲ್ಲಿ ಅವಕಾಶ ನೀಡಬೇಕು ಎಂದು ಅವರು ಕೋರಿದ್ದಾರೆ.ಗೌರಿಬಿದನೂರಿನ ಮೂಲಕ ಹಾದು ಹೋಗುವ ಕೊಯಂಮತ್ತೂರು ಕುರ್ಲಾ ಎಕ್ಸ್‌ಪ್ರೆಸ್, ಕರ್ನಾಟಕದ ಎಕ್ಸ್‌ಪ್ರೆಸ್, ಯಶವಂತಪುರ-ಶಿರಡಿ ಎಕ್ಸ್‌ಪ್ರೆಸ್ ಮತ್ತು ಯಶವಂತಪುರ ಮಚಲಿಪಟ್ಟಣಂ ರೈಲುಗಳನ್ನು ಗೌರಿಬಿದನೂರು ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ ಮಾಡಲು ಅವಕಾಶ ಮಾಡಿಕೊಡಬೇಕು. ಬೆಂಗಳೂರು ಗುಂತಕಲ್ ರೈಲ್ವೆ ಮಾರ್ಗವನ್ನು ವಿದ್ಯುತ್ತೀಕರಣ ಗೊಳಿಸಬೇಕು. ದ್ವಿಪಥ ಮಾರ್ಗವಾಗಿ ಪರಿವರ್ತಿಸಬೇಕು. ಗೌರಿಬಿದನೂರು ರೈಲ್ವೆ ನಿಲ್ದಾಣದಲ್ಲಿ ಅಂಡರ್‌ಪಾಸ್ ನಿರ್ಮಾಣ ಮಾಡಬೇಕು. ಈ ಕಾಮಗಾರಿಗಳನ್ನು ಹೊಸ ಬಜೆಟ್‌ನಲ್ಲಿ ಸೇರಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.