ಸೋಮವಾರ, ಮೇ 17, 2021
27 °C

`ಆಧಾರ್' ಆತಂಕ ಬೇಡ: ಡಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿಕಾರಿಪುರ: `ಆಧಾರ್' ಕಾರ್ಡ್ ಪಡೆಯುವ ಬಗ್ಗೆ ಜನತೆಯಲ್ಲಿ ಯಾವುದೇ ಆತಂಕ ಬೇಡ ಎಂದು ಜಿಲ್ಲಾಧಿಕಾರಿ ವಿಫುಲ್ ಬನ್ಸಾಲ್ ಹೇಳಿದರು. ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.`ಆಧಾರ್' ಕಾರ್ಡ್ ಹೊಂದದೇ ಇರುವವರಿಗೆ ಸರ್ಕಾರಿ ಸೌಲಭ್ಯಗಳು ಸಿಗುವುದಿಲ್ಲ ಎಂಬ ಆತಂಕ ಜನತೆಯಲ್ಲಿ ಬೇಡ. ಆಧಾರ್ ಕಾರ್ಡ್ ಇಲ್ಲದಿದ್ದರೂ ಸರ್ಕಾರಿ ಸೌಲಭ್ಯಗಳು ದೊರೆಯುತ್ತವೆ. ಆಧಾರ್ ಕಾರ್ಡ್ ಮಾಡಿಸಲು ಇನ್ನೂ ಕಾಲಾವಕಾಶವಿದ್ದು, ಮುಂದಿನ ದಿನಗಳಲ್ಲಿ ತುರ್ತು ಎನಿಸಿದರೆ ಹೆಚ್ಚಿನ ನೋಂದಣಿ ಕೇಂದ್ರಗಳನ್ನು ವಾರ್ಡ್‌ಗಳ ಮಟ್ಟದಲ್ಲಿ ಸ್ಥಾಪಿಸಲಾಗುತ್ತದೆ.ಸರ್ಕಾರ ಬದಲಾಗಿರುವುದರಿಂದ ಜಿಲ್ಲೆಯಲ್ಲಿರುವ ಕೆಲವು ತಾಲ್ಲೂಕಿನ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಆದ್ಯತೆ ಸಿಗುವುದಿಲ್ಲ ಎಂಬ ಆತಂಕ ಬೇಡ. ಯಾವುದೇ ಸರ್ಕಾರ ಅಸ್ತಿತ್ವಕ್ಕೆ ಬಂದರೂ ಸರ್ಕಾರದಿಂದ ಬರುವ ಸೌಲಭ್ಯಗಳು ಮಾತ್ರ ಎಂದಿನಂತೆ ಜಿಲ್ಲೆಯಲ್ಲಿರುವ ಎಲ್ಲ ತಾಲ್ಲೂಕುಗಳಿಗೆ ಲಭ್ಯವಾಗಲಿದ್ದು, ಅಧಿಕಾರಿಗಳು ಅಭಿವೃದ್ಧಿ ಕಾರ್ಯಗಳ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು ಎಂದರು.ಸಂಧ್ಯಾ ಸುರಕ್ಷಾ, ವಿಧವಾ ವೇತನ, ಅಂಗವಿಕಲ ವೇತನ ಸಾಮಾಜಿಕ ಭದ್ರತಾ ಯೋಜನೆಗಳನ್ನು ಜನರಿಗೆ ಸಮರ್ಪಕವಾಗಿ ತಲುಪಿಸುವ ನಿಟ್ಟಿನಲ್ಲಿ ಕಂದಾಯ ನಿರೀಕ್ಷಕರು, ತಮಗೆ ಬಂದ ಅರ್ಜಿಗಳನ್ನು ವಿಳಂಬ ಮಾಡದೇ ತುರ್ತಾಗಿ ವಿಲೇವಾರಿ ಮಾಡಬೇಕೆಂದು ಆದೇಶಿಸಿದರು.ಡೆಂಗೆ ತಡೆಗಟ್ಟುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಗಮನ ಹರಿಸುವ ಮೂಲಕ ಪ್ರತಿ ಗ್ರಾಮಗಳಲ್ಲಿ ಮುಂಜಾ ಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. 

 

ತಹಶೀಲ್ದಾರ್ ಪ್ರಕಾಶ್ ಗಣಾಚಾರಿ, ತಾಲ್ಲೂಕು ಪಂಚಾಯ್ತಿ ಕಾರ್ಯ ನಿರ್ವಾಹಕ ಅಧಿಕಾರಿ ಡಾ.ಚಂದ್ರ ಶೇಖರ್, ಪುರಸಭೆ ಮುಖ್ಯಾಧಿಕಾರಿ ಮನೋಹರ್, ಜಿಲ್ಲಾ ಸರ್ಜನ್ ಡಾ.ತಿಪ್ಪೇಶ್, ತಾಲ್ಲೂಕು ವೈದ್ಯಾಧಿಕಾರಿ ಡಾ.ನಾಗರಾಜ್ ನಾಯ್ಕ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಪ್ರಭಾಕರ್, ಲೋಕೋಪಯೋಗಿ ಎಂಜಿನಿಯರ್ ರಮೇಶ್ ಬ್ಯಾಣದ್, ಉಪ ತಹಶೀಲ್ದಾರ್ ಎನ್.ಜೆ. ನಾಗರಾಜ್, ಆನಂದ ಗರಡಿ, ರಾಜೀವ್, ಕಂದಾಯ ನಿರೀಕ್ಷಕ ಮಂಜುನಾಥ್ ಉಪಸ್ಥಿತರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.